ಬೆಂಗಳೂರು:ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಸರ್ಕಾರ ಒದಗಿಸಿರುವ ಉಚಿತ ವಿದ್ಯುತ್ ಸೌಲಭ್ಯ ಪಡೆದುಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಮತ್ತೊಂದು ಸೂಚನೆ ನೀಡಿದೆ.
ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಸರ್ಕಾರ ಉಚಿತವಾಗಿ ವಿದ್ಯುತ್ ಒದಗಿಸುವುದಾಗಿ ೋಷಣೆ ಮಾಡಿದ್ದರೂ ವಿವಿಧ ಎಸ್ಕಾಂಗಳು ವಿದ್ಯುತ್ ಶುಲ್ಕ ವಸೂಲು ಮಾಡುತ್ತಿದ್ದವು. ಈ ಕುರಿತು ‘ವಿಜಯವಾಣಿ’ ಜೂ.23 ರಂದು ‘ಶಾಲೆಗಳಿಗೆ ಕತ್ತಲೆ ಭಾಗ್ಯ’ ವಿಶೇಷ ವರದಿ ಮಾಡಿತ್ತು.
ಈ ವರದಿ ಪ್ರಕಟವಾದ ಬೆನ್ನಲ್ಲೇ ಶಾಲಾ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡು ಈ ಸೂಚನೆ ನೀಡಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಒದಗಿಸಿರುವ ವಿದ್ಯುತ್ ಸೌಲಭ್ಯವನ್ನು ಉಚಿತವಾಗಿ ಒದಗಿಸುವ ಬಗ್ಗೆ ಅವಶ್ಯವಿರುವ ಮಾಹಿತಿಯನ್ನು ಗೂಗಲ್ ಸ್ಪ್ರೆಡ್ ಶೀಟ್‌ನಲ್ಲಿ ಅಪ್‌ಲೋಡ್ ಮಾಡುವಂತೆ ತಿಳಿಸಲಾಗಿದೆ.ಜು.14 ರ ಒಳಗೆ ಗೂಗಲ್ ಸ್ಪ್ರೆಡ್‌ಶೀಟ್‌ನಲ್ಲಿ ಮಾಹಿತಿ ಅಪ್‌ಲೋಡ್ ಮಾಡಬೇಕು.
ಅಪ್‌ಲೋಡ್ ಮಾಡದಿದ್ದರೆ ಯೋಜನೆಯಿಂದ ಶಾಲೆಗಳನ್ನು ಕೈಬಿಡಲಾಗುವುದು ಮತ್ತು ಅಂತಹ ಶಾಲೆಗಳ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − ten =
Remember me
