ಬೆಂಗಳೂರು:ರಾಜ್ಯದಲ್ಲಿ ಈವರೆಗೆ ಕರೊನಾ ಸೋಂಕಿಗೆ ತುತ್ತಾಗಿ 9 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿರುವುದು ಕೊಂಚ ನಿರಾಳವಾಗುವಂತಾಗಿದೆ. ಆದರೂ, ಗುಣಮುಖರಾದವರು ಮುಂದಿನ 14 ದಿನ ಸಾಕಷ್ಟು ಎಚ್ಚರಿಕೆಯಿಂದಿರಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಸೋಂಕಿಗೆ ಒಳಗಾಗಿ ಗುಣಮುಖರಾದವರು 14 ದಿನ ಯಾರ ಸಂಪರ್ಕಕ್ಕೂ ಬಾರದೆ, ಪ್ರತ್ಯೇಕ ನಿಗಾದಲ್ಲಿರಬೇಕು. ವೈರಸ್​ನಿಂದಾಗಿ ದೇಹ ಸಾಕಷ್ಟು ಬಳಲಿರುತ್ತದೆ. ಅದರಿಂದ ಚೇತರಿಸಿಕೊಳ್ಳಲು ಪೌಷ್ಟಿಕ ಆಹಾರ ಸೇವಿಸಬೇಕು, ಹೆಚ್ಚಿನ ವಿಶ್ರಾಂತಿ ಪಡೆಯಬೇಕು, ಸ್ವಲ್ಪ ಮಟ್ಟಿಗೆ ವ್ಯಾಯಾಮ ಮಾಡಬೇಕಿದೆ. ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಯಿದ್ದರೆ, ಅದಕ್ಕೆ ಸಂಬಂಧಿಸಿದ ಔಷಧಗಳನ್ನು ಸೇವಿಸಬಹುದಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಬಂದ ನಂತರದ 14 ದಿನ ಯಾರ ಸಂಪರ್ಕಕ್ಕೂ ಬಾರದೆ ಪ್ರತ್ಯೇಕವಾಗಿರಬೇಕು. ಈ ಅವಧಿಯಲ್ಲಿ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕಾಣಿಸಿಕೊಂಡರು ಆಸ್ಪತ್ರೆ ಸಂರ್ಪಸಬೇಕು.
| ಡಾ. ನಾಗರಾಜ್ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ನಿರ್ದೇಶಕ
ನಿತ್ಯ ಕೌನ್ಸಲಿಂಗ್
ಆಸ್ಪತ್ರೆಯಲ್ಲಿ 28 ದಿನಗಳ ನಿಗಾ, ನಂತರ ಮನೆಯಲ್ಲಿ 14 ದಿನಗಳ ಪ್ರತ್ಯೇಕತೆಯಿಂದಾಗಿ ರೋಗಿ ಮಾನಸಿಕವಾಗಿ ಕುಗ್ಗುವ ಸಾಧ್ಯತೆಗಳಿವೆ. ಹೀಗಾಗಿ ಅವರ ಆತ್ಮಸ್ಥೈರ್ಯ ಹೆಚ್ಚಿಸಲು ಆರೋಗ್ಯ ಇಲಾಖೆಯ ಮನೋರೋಗ ತಜ್ಞರು ನಿತ್ಯ ಕರೆ ಮಾಡಿ ಕೌನ್ಸಲಿಂಗ್ ಮಾಡಲಿದ್ದಾರೆ.
ಮನುಷ್ಯನಿಗೆ ಆವರಿಸುತ್ತೆ ಮದ್ದಿಲ್ಲದ ಕಾಯಿಲೆ: ನಿಜವಾಯ್ತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 18 =
Remember me
