ನೆಲಮಂಗಲ/ತುಮಕೂರು:ದೇಶದಲ್ಲಿ ಐಎಎಸ್ ಅಧಿಕಾರಿಗಳ ಕೊರತೆ ಮನಗಂಡು ರಾಜ್ಯದ ಉನ್ನತ ವಿಶ್ವವಿದ್ಯಾಲಯಗಳಲ್ಲಿ ದಲಿತರಿಗೆ ಐಎಎಸ್ ಕೋಚಿಂಗ್ ಸೆಂಟರ್ ಸ್ಥಾಪಿಸಿ, ಉಚಿತವಾಗಿ ತರಬೇತಿ ನೀಡಲಾಗುವುದು ಹಾಗೂ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಅಂಬೇಡ್ಕರ್ ನವೋದಯ ಶಾಲೆ ಆರಂಭಿಸಲಾಗುವುದು ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು. ನೆಲಮಂಗಲದಲ್ಲಿ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ಜನಾಶೀರ್ವಾದ ಯಾತ್ರೆ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಪ್ರಧಾನಿ ಮೋದಿ ಮಂತ್ರಿ ಮಂಡಲ ವಿಸ್ತರಣೆಯಿಂದ ದಲಿತ ಹಾಗೂ ಹಿಂದುಳಿದ ಪರವಾದ ಹೊಸ ಯುಗ ಆರಂಭವಾಗಿದೆ ಎಂದರು.
ಮಂತ್ರಿಮಂಡಲ ವಿಸ್ತರಣೆ ಸಂದರ್ಭ ದಕ್ಷಿಣ ಭಾರತದ ಪ್ರಾತಿನಿಧ್ಯ ಕುರಿತು ಚರ್ಚೆಗಳು ನಡೆದಿದ್ದವು. ಆದರೆ ಸಂಪುಟದಲ್ಲಿ 12 ಎಸ್​ಸಿ, 6 ಎಸ್​ಟಿ, 2 ಬುಡಕಟ್ಟು ಜನಾಂಗದವರಿಗೆ ಸಚಿವ ಸ್ಥಾನ ಕೊಟ್ಟು ಸಾಮಾಜಿಕ ನ್ಯಾಯ ಒದಗಿಸಿರುವ ಕೇಂದ್ರ ಸರ್ಕಾರದ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ಆಗಬೇಕಿತ್ತು. ಆದರೆ ಅದು ಆಗುತ್ತಿಲ್ಲ ಎಂದು ನಾರಾಯಣಸ್ವಾಮಿ ಬೇಸರಿಸಿದರು.
ಮಂತ್ರಿಮಂಡಲದ ನೂತನ ಸಚಿವರು ಮತ್ತವರ ಅಭಿವೃದ್ಧಿ ಕಾರ್ಯ ಪರಿಚಯಿಸಲು ಸಂಸತ್​ನಲ್ಲಿ ಅವಕಾಶ ಕೊಡಬೇಕಿತ್ತು. ಆದರೆ ಪ್ರತಿಪಕ್ಷದವರು ಚರ್ಚೆಗೆ ಅವಕಾಶ ಮಾಡಿಕೊಡಲಿಲ್ಲ. ಆದ್ದರಿಂದ ಜನಾಶೀರ್ವಾದ ಯಾತ್ರೆಯ ಮೂಲಕ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳ ಬಗ್ಗೆ ಜನಸಾಮಾನ್ಯರಲ್ಲಿ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಸಿದ್ದಗಂಗಾ ಮಠಕ್ಕೆ ಭೇಟಿ:ಮಂಗಳವಾರ ಮಧ್ಯಾಹ್ನ ತುಮಕೂರು ಪ್ರವೇಶಿಸಿದ ಜನಾಶೀರ್ವಾದ ಯಾತ್ರೆಗೆ ಬಿಜೆಪಿ ಜಿಲ್ಲಾ ಘಟಕದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ನಾರಾಯಣಸ್ವಾಮಿ, ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀ ಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರ ಹಾಗೂ ಜನರ ನಡುವಿನ ಕೊಂಡಿಯಾಗಿ ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ ಎಂದು ಹೇಳಿದರು. 19ಕ್ಕೆ ಬೆಂಗ್ಳೂರಲ್ಲಿ ಯಾತ್ರೆ ಕೇಂದ್ರ ಸಚಿವರನ್ನು ದೇಶದ ಜನರಿಗೆ ಪರಿಚಯಿಸಲು ಹಮ್ಮಿಕೊಂಡಿರುವ ಜನಾಶೀರ್ವಾದ ಯಾತ್ರೆ ಬೆಂಗಳೂರಿನಲ್ಲಿ ಆ.19ರಂದು ನಡೆಯಲಿದೆ.
ಆಟ ಆಡ್ತ ಆಡ್ತ ಸತ್ತು ಹೋದ ಬಾಲಕಿ: ಶಾಲೆ ತೆರೆದಿಲ್ಲ, ಮಕ್ಕಳು ಮನೇಲೇ ಇದ್ದಾರೆ ಅಂತಾದರೆ ಯಾವುದಕ್ಕೂ ಹುಷಾರಾಗಿರಿ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
