ಬೆಂಗಳೂರು:ಇಂದು ಸಚಿವ ಸಂಪುಟ ಸಭೆಯ ನಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್​ನ ಐದು ಗ್ಯಾರಂಟಿಗಳಲ್ಲಿ ಎಲ್ಲವನ್ನೂ ಈ ವರ್ಷವೇ ಜಾರಿ ಮಾಡುವುದಾಗಿ ಹೇಳಿದ್ದಾರೆ. ಇದೀಗ ಯುವ ನಿಧಿ ಅಡಿಯಲ್ಲಿ 24 ತಿಂಗಳ ತನಕ ಪದವೀಧರರಿಗೆ ಹಾಗೂ ಡಿಪ್ಲೊಮಾ ಮಾಸಿಕ ಮಾಸಿಕ ಭತ್ಯೆ ನೀಡುತ್ತೇವೆ ಎಂದು ಘೋಷಿಸಿದ್ದಾರೆ.
ಇಂದು ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ “ಈ ಆರ್ಥಿಕ ವರ್ಷದಲ್ಲಿ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ನಾವು ಚುನಾವಣೆ ಸಂದರ್ಭದಲ್ಲಿ ಪಕ್ಷದ ವತಿಯಿಂದ ಐದು ಗ್ಯಾರಂಟಿ ಘೋಷಣೆ ಮಾಡಿದ್ದೆವು. ಗ್ಯಾರಂಟಿ ಕಾರ್ಡ್​ಗಳಿಗೆ ನಾನು ಮತ್ತು ಡಿಕೆ ಶಿವಕುಮಾರ್ ಸಹಿ ಮಾಡಿದ್ದೆವು. ಜನರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವ ಭರವಸೆ ನೀಡಿದ್ದೆವು.
ಯುವ ನಿಧಿ- 2023-24ರಲ್ಲಿ ತೇರ್ಗಡೆಯಾದವರಿಗೆ 24 ತಿಂಗಳ ತನಕ ಮಾಸಿಕ 3,000 ರೂ., ಡಿಪ್ಲೊಮಾ 1,500 ರೂ ಮಾಸಿಕ ಭತ್ಯೆ. ಇದೇ ಅವಧಿಯಲ್ಲಿ ಯಾರಿಗಾದರೂ ಸರ್ಕಾರಿ ಅಥವಾ ಖಾಸಗಿ ನೌಕರಿ ಸಿಕ್ಕರೆ ಭತ್ಯೆ ಸಿಗುವುದಿಲ್ಲ” ಎಂದು ಘೋಷಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 7 =
Remember me
