ಬೆಂಗಳೂರು:ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಕ್ರಮ ವಹಿಸಿದ್ದಾರೆ. ಹೆಚ್ಚು ಚಿಕಿತ್ಸಾ ವೆಚ್ಚ ತಗುಲುವ ಕಾಯಿಲೆಗಳಿಗೂ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ. ಈ ಮೂಲಕ ಬಡ ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಹೊಸ ಕೊಡುಗೆ ನೀಡಿದೆ.
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ವಿವಿಧ ಕಾಯಿಲೆಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್​ನಿಂದ ಚಿಕಿತ್ಸಾ ವೆಚ್ಚ ಭರಿಸಲಾಗುತ್ತಿದೆ. ಆದರೆ, ಕೆಲ ವಿರಳ ಕಾಯಿಲೆಗಳನ್ನು ಈ ಯೋಜನೆಯಡಿ ಸೇರಿಸಲಾಗಿಲ್ಲ. ಅಲ್ಲದೆ, ಇಂತಹ ರೋಗಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಇರುವುದಿಲ್ಲ. ಅಂತಹ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿ ಆ ವೆಚ್ಚ ಭರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಳು ಹಾಗೂ ವೆಚ್ಚದ ಪಟ್ಟಿಯನ್ನು ಸಿದ್ಧಪಡಿಸಿದ್ದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ. ಇದರ ಜತೆಗೆ, ಹೆಚ್ಚು ವೆಚ್ಚ ತಗುಲುವ ಕಾಯಿಲೆಗಳ ಚಿಕಿತ್ಸಾ ವಿಧಾನ ಗುರುತಿಸಿ, ಅವುಗಳಿಗೂ ವೆಚ್ಚ ನಿಗದಿ ಮಾಡಲು ಕ್ರಮ ವಹಿಸಲಾಗಿದೆ.
ದೊಡ್ಡಬಳ್ಳಾಪುರದಲ್ಲಿ ಸೆ.11 ರಂದು ಜನಸ್ಪಂದನ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಸೆ.11 ರಿಂದ ಪಿತೃಪಕ್ಷ ಆರಂಭವಾಗುವುದನ್ನು ಸಿಎಂ ಹಾಗೂ ಹೈಕಮಾಂಡ್​ಗೆ ಮನವರಿಕೆ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಸೆ.10ಕ್ಕೆ ಜನಸ್ಪಂದನ ಕಾರ್ಯಕ್ರಮ ನಡೆಸಲು ತೀರ್ವನಿಸಲಾಗಿದೆ. ಇದರಲ್ಲಿ ಬೇರೆ ಉದ್ದೇಶವೇನೂ ಇಲ್ಲ.
|ಡಾ.ಕೆ. ಸುಧಾಕರ್ಆರೋಗ್ಯ ಸಚಿವ
ಇದಕ್ಕಾಗಿ ಗಿರಿಜನ ಉಪಯೋಜನೆಯಡಿ 7.39 ಕೋಟಿ ರೂ., ಪರಿಶಿಷ್ಟ ಜಾತಿ ಉಪಯೋಜನೆಯಡಿ 15.79 ಕೋಟಿ ಸೇರಿ, ಒಟ್ಟು 23.18 ಕೋಟಿ ರೂ. ಮೊತ್ತವನ್ನು ಪುನರ್ ವಿನಿಯೋಗದ ಮೂಲಕ ಬಿಡುಗಡೆ ಮಾಡಿ ಆದೇಶಿಸಲಾಗಿದೆ. ಪಿಇಟಿ ಸ್ಕ್ಯಾನ್​ಗೆ 10,000 ರೂ., ಅಸ್ಥಿಮಜ್ಜೆ ಕಸಿಗೆ ಎರಡು ವಿಧಾನಗಳಲ್ಲಿ 7 ಲಕ್ಷ ರೂ. ಹಾಗೂ 21 ಲಕ್ಷ ರೂ., ರೋಬಾಟಿಕ್ ಸರ್ಜರಿಗೆ 1.50 ಲಕ್ಷ ರೂ. ಸೇರಿದಂತೆ ವಿವಿಧ ಚಿಕಿತ್ಸೆಗಳಿಗೆ ವೆಚ್ಚ ನಿಗದಿ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಬಡ ಜನರ ಆರೋಗ್ಯ ರಕ್ಷಣೆಗಾಗಿ ಜಾರಿ ಮಾಡಿರುವ ಆಯುಷ್ಮಾನ್ ಯೋಜನೆಯನ್ನು ವಿಸ್ತರಿಸುವ ಕೆಲಸವನ್ನು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಮಾಡುತ್ತಿದೆ. ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚವನ್ನು ಭರಿಸುವ ಮಹತ್ವದ ನಿರ್ಣಯವನ್ನು ಸರ್ಕಾರ ಕೈಗೊಂಡಿದೆ. ಜತೆಗೆ, ಹೆಚ್ಚು ವೆಚ್ಚ ತಗುಲುವ ಚಿಕಿತ್ಸೆಗಳಿಗೂ ದರ ನಿಗದಿ ಮಾಡಿ, ಆ ವೆಚ್ಚ ಭರಿಸುವ ಕ್ರಮ ವಹಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಇದರಿಂದ ಬಹಳಷ್ಟು ಪ್ರಯೋಜನವಾಗಲಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
ಮದ್ಯಪಾನ ಮಾಡಿಕೊಂಡೇ ಶಾಲೆಗೆ ಬರುತ್ತಿದ್ದ ಶಿಕ್ಷಕಿ; ಬಾಟಲಿ ಸಮೇತ ಸಿಕ್ಕಿಬಿದ್ದು ಅಮಾನತು..

ಹಿಜಾಬ್ ಜತೆ ಸಿಖ್ಖರ ಕಿರ್ಪನ್​ ಮತ್ತು ಟರ್ಬನ್​ ಹೋಲಿಕೆ ಇಲ್ಲ: ಸುಪ್ರೀಂ ಕೋರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 2 =
Remember me
