ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿರೀಕ್ಷೆಯಂತೆ ಡಾಕ್ಟರ್​ ಸಿ.ಎನ್​. ಮಂಜುನಾಥ್ ಅವರಿಗೆ ಬಿಜೆಪಿ ಪಕ್ಷ ಟಿಕೆಟ್​ ಘೋಷಿಸಿದೆ.
ಇದನ್ನೂ ಓದಿ:ಇನ್ನು ಪೇಟಿಎಂ ಫಾಸ್​ಟ್ಯಾಗ್ ಸ್ಥಗಿತ! ಮುಂದೆ ಏನು ಮಾಡಬೇಕು, ಇಲ್ಲಿದೆ ನೋಡಿ ಮಾಹಿತಿ ?
ಖ್ಯಾತ ಹೃದಯ ರೋಗ ತಜ್ಞ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಅಳಿಯ ಡಾ. ಸಿ ಎನ್ ಮಂಜುನಾಥ್ ಅವರಿಗೆ ಟಿಕೆಟ್​ ನೀಡಿದ್ದು ರಾಜಕೀಯ ಚಟುವಟಿಕೆ ಗರಿಗೆದರಿದೆ.
ಡಾ. ಸಿಎನ್ ಮಂಜುನಾಥ್ ಅವರು ಗುರುವಾರ ಬಿಜೆಪಿ ಸೇರಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಹಾಲಿ ಸಂಸದ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿಎನ್ ಮಂಜುನಾಥ್ ಸ್ಪರ್ದೆ ಮಾಡಲಿದ್ದಾರೆ.
ಕುಮಾರಸ್ವಾಮಿ ಒತ್ತಡವೇ ಮಂಜುನಾಥ್ ಸ್ಪರ್ಧೆಗೆ ಕಾರಣ:ಮಂಗಳಾವರ ರಾಮನಗರ ಮುಖಂಡರ ಸಭೆಯಲ್ಲಿ ಕುಮಾರಸ್ವಾಮಿ ಅವರು ಮಾತನಾಡಿ, ನನ್ನ ಸಹೋದರಿ ಮನೆಯಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ನಮ್ಮನ್ನು ಯಾಕೆ ರಾಜಕೀಯಕ್ಕೆ ಎಳೆಯುತ್ತೀರಿ, ನೆಮ್ಮದಿಯಿಂದ ಇದ್ದೇವೆ, ನಮಗೆ ರಾಜಕೀಯ ಬೇಡ ಅಂತ ಅಳುತ್ತಾ ಕೂತಿದ್ದಾರೆ. ಇದು ನಮ್ಮ ಮನೆಯ ಪರಿಸ್ಥಿತಿ. ನನ್ನ ನೋವು ನನಗೇ ಗೊತ್ತು. ಆದರೆ, ವಿರೋಧಿಗಳನ್ನು ಮಣಿಸಲೇಬೇಕು. ಇದು ನನ್ನ ಗುರಿ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದರು.
ಜಯದೇವ ಹೃದ್ರೋಗ ಸಂಸ್ಥೆಯ ವಿಶ್ರಾಂತ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ಅವರನ್ನೇ ಬೆಂಗಳೂರು ಗ್ರಾಮಾಂತರ ನಿಲ್ಲಿಸಬೇಕು ಎಂಬುದು ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದರು. ಜಡೆಎಸ್​ ಮತ್ತು ಬಿಜೆಪಿ ಪಕ್ಷದ ನಾಯಕರು, ಮುಖಂಡರು ಅದೇ ಅಭಿಲಾಷೆ ಹೊಂದಿದ್ದಾರೆ. ಎನ್ ಡಿಎ ಮೈತ್ರಿಕೂಟದ ಒಮ್ಮತ ಅಭ್ಯರ್ಥಿ ಆಗಬೇಕು ಎರಡೂ ಪಕ್ಷಗಳೂ ಬಯಸಿದ್ದು, ಡಾ. ಮಂಜುನಾಥ್‌ ಅವರು ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವ ತೀರ್ಮಾನವನ್ನು ಮುಖಂಡರಾದ ನಿಮಗೆ ಬಿಡುತ್ತೇನೆ ಎಂದು ಸಭೆಯಲ್ಲಿ ಕುಮಾರಸ್ವಾಮಿ ಅವರು ಹೇಳಿದ್ದರು.
ಯಾರ್ಯಾರಿಗೆ ಟಿಕೆಟ್?
ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಒಬ್ಬ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಫೈನಲ್!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four + two =
Remember me
