ಬೆಂಗಳೂರು:ಲೋಕಸಭೆ ಚುನಾವಣೆಗೆ ಜೆಡಿಎಸ್ ಪಟ್ಟಿಯ ಕುತೂಹಲಕ್ಕೆ ತೆರೆ ಬಿದ್ದಿದೆ. ಪಕ್ಷದ ನಾಯಕರು, ಕಾರ್ಯಕರ್ತರ ಒತ್ತಡಕ್ಕೆ ಮಣಿದ ಮಾಜಿ ಸಿಎಂ ಕುಮಾರಸ್ವಾಮಿ ಮಂಡ್ಯದಲ್ಲಿ ಕಣಕ್ಕಿಳಿಯಲು ಒಪ್ಪಿದರೆ, ಹಾಸನದಿಂದ ಪ್ರಜ್ವಲ್ ರೇವಣ್ಣ, ಕೋಲಾರದಲ್ಲಿ ಮಲ್ಲೇಶ್ ಬಾಬುಗೆ ಟಿಕೆಟ್ ನೀಡುವ ವಿಚಾರವನ್ನು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಘೋಷಿಸಿದರು.
ಕೋರ್ ಕಮಿಟಿ ನಿರ್ಧಾರ:ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮನೆಯಲ್ಲಿ ಶಾಸಕ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಮಾಜಿ ಸಂಸದ, ಮಾಜಿ ಸಚಿವ ಪುಟ್ಟರಾಜು ಹೆಸರು ಕೇಳಿಬಂದಿತ್ತಾದರೂ ಅನಿವಾರ್ಯ ಪರಿಸ್ಥಿತಿಯಲ್ಲಿ ಮಂಡ್ಯದಲ್ಲಿ ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡಬೇಕೆಂಬ ಸಹಮತಕ್ಕೆ ಬರಲಾಯಿತು.
ಹಾಸನದಲ್ಲಿ ಪ್ರಜ್ವಲ!: ಹಾಸನಕ್ಕೆ ಪ್ರಜ್ವಲ್ ಹೆಸರು ಮೊದಲೇ ಘೋಷಣೆ ಆಗಿತ್ತು. ಅದರೆ ಅಭ್ಯರ್ಥಿ ಬದಲಿಸಬೇಕೆಂಬ ಒತ್ತಡ ಬಂದರೂ ವರಿಷ್ಠರು ಅದಕ್ಕೆ ಸೊಪು್ಪ ಹಾಕಿಲ್ಲ. ಕೋಲಾರದಲ್ಲಿ ಜೆಡಿಎಸ್ ಟಿಕೆಟ್ ಗಿಟ್ಟಿಸಿಕೊಂಡಿರುವ ಮಲ್ಲೇಶ್ ಬಾಬು ಕಳೆದ ಬಾರಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ನಿಂದ ಪ್ರಬಲ ಪೈಪೋಟಿ ನೀಡಿದ್ದರು. ಹೀಗಾಗಿಯೇ ಸಮೃದ್ಧಿ ಮಂಜುನಾಥ್, ನಿಸರ್ಗ ನಾರಾಯಣಸ್ವಾಮಿಯನ್ನು ಬಿಟ್ಟು ಮಲ್ಲೇಶ್​ಬಾಬುಗೆ ಟಿಕೆಟ್ ದೊರೆತಿದೆ. ಇನ್ನು ಹಾಲಿ ಸಂಸದ ಮುನಿಸ್ವಾಮಿ ಜತೆ ಕೂಡ ಚರ್ಚೆ ಮಾಡಿದ್ದು, ಒಟ್ಟಾಗಿ ಕೆಲಸ ಮಾಡುವ ನಿರ್ಣಯ ಕೈಗೊಂಡಿರುವುದಾಗಿ ಎಚ್​ಡಿಕೆ ಹೇಳಿದರು.
ಎಚ್​ಡಿಕೆ ಭರವಸೆಗಳೇನು?
ರಾಜಕೀಯಕ್ಕೆ ಎಂಟ್ರಿ ಕೊಟ್ಟ ಖ್ಯಾತ ನಟಿ ಅನುಷ್ಕಾ ಶೆಟ್ಟಿ..! ಈ ಪಕ್ಷದಿಂದ ಎಂಎಲ್​ಎ ಎಲೆಕ್ಷನ್‌ಗೆ ಸ್ಪರ್ಧೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + nineteen =
Remember me
