ಬೆಂಗಳೂರು:ಶಿಕ್ಷಣ ಇಲಾಖೆಯು 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್ ಪರೀಕ್ಷೆ ನಡೆಸುವ ಸಂಬಂಧ ಅಧಿಕೃತ ಆದೇಶ ಪ್ರಕಟಿಸಿದೆ.
ಈಗಾಗಲೇ 5, 8, 10 ಮತ್ತು 12ನೇ ತರಗತಿಗೆ ವಾರ್ಷಿಕ ಪರೀಕ್ಷೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ ನಡೆಸಲಾಗುತ್ತಿದೆ. ಅದೇ ರೀತಿ 9ನೇ ತರಗತಿ ವಿದ್ಯಾರ್ಥಿಗಳಿಗೂ ಸಂಕಲನಾತ್ಮಕ ಮೌಲ್ಯಮಾಪನ-2 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ (2023-24) ನಡೆಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ವಾರ್ಷಿಕ ಪರೀಕ್ಷೆಯನ್ನು ಮಂಡಳಿ ವತಿಯಿಂದಲೇ ನಡೆಸುವುದರಿಂದ ಎಲ್ಲ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಪರಿಶೀಲಿಸುವ ಮೂಲಕ ವಿದ್ಯಾರ್ಥಿಗಳ ಪ್ರಗತಿಯನ್ನು ಬಲವರ್ಧನೆಗೊಳಿಸಲು ಅನುಕೂಲವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 8 =
Remember me
