ಬೆಂಗಳೂರು:ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದಿನಿಂದ ಆರಂಭವಾದ ಹೋಂ ವೋಟಿಂಗ್​ನಲ್ಲಿ ತುಮಕೂರು ನಗರದ ಎಸ್ ಐಟಿ ಬಡಾವಣೆಯ 86 ವರ್ಷದ ಕೆ.ಸಿ.ಶಿವಗಂಗಯ್ಯ ಅವರು ಹೋಮ್ ವೋಟಿಂಗ್ ಮೂಲಕ ಮತದಾನ ಮಾಡಿದರು. ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3958 ಮಂದಿ ಹೋಂ ವೋಟಿಂಗ್​ಗೆ ನೋಂದಾಯಿಸಿಕೊಂಡಿದ್ದಾರೆ. ಅಂಗವಿಕಲರು 889 ಹಾಗೂ 85 ವರ್ಷ ಮೇಲ್ಪಟ್ಟ ಹಿರಿಯರು 3069 ನೋಂದಾಯಿಸಿಕೊಂಡಿದ್ದಾರೆ.
ಇದನ್ನೂ ಓದಿ:ರಾಮಾಯಣದಲ್ಲಿ ಸಾಯಿ ಪಲ್ಲವಿಗೆ ದಾಖಲೆ ಸಂಭಾವನೆ.. ಎಷ್ಟು ಕೋಟಿ ಗೊತ್ತಾ?
ಮನೆಯಿಂದ ಅಂಚೆ ಮತದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡವರ ಮನೆಗೆ ಏ.13ರಿಂದ ಏ.18ರವರೆಗೆ ಎರಡು ಬಾರಿ ಮಾತ್ರ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. 85 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕಲರಿಗೆ ಇಂದಿನಿಂದ ( ಏ.13) ಅಂಚೆ ಮತದಾನ ಆರಂಭಗೊಳ್ಳಲಿದೆ.
ಮತಗಟ್ಟೆ ಸಿಬ್ಬಂದಿಯು ಮತಪತ್ರ ಹಾಗೂ ಮತಪೆಟ್ಟಿಗೆಗಳೊಂದಿಗೆ ಪ್ರತಿ ಮತದಾರರ ಮನೆಗೆ ಎರಡು ಬಾರಿ ಭೇಟಿ ನೀಡುತ್ತಾರೆ. ಭೇಟಿ ನೀಡುವ ಬಗ್ಗೆ ಮತದಾರರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗಿರುತ್ತದೆ. ಒಂದು ವೇಳೆ ಮೊದಲ ಬಾರಿ ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರು ಮನೆಯಲ್ಲಿ ಲಭ್ಯವಾಗದಿದ್ದರೆ, ಎರಡನೇ ಬಾರಿ ಮಾಹಿತಿ ನೀಡಿ ಭೇಟಿ ನೀಡಲಾಗುತ್ತದೆ. ಆದರೂ ಮತದಾರರು ಲಭ್ಯವಾಗದಿದ್ದರೆ ಮತ್ತೆ ಮತದಾನಕ್ಕೆ ಅವಕಾಶ ನೀಡುವುದಿಲ್ಲ.
ಇದನ್ನೂ ಓದಿ:ಬೆವರಿನ ಕೆಟ್ಟ ವಾಸನೆಯಿಂದ ಮುಜುಗರ ಆಗ್ತಿದ್ಯಾ?; ಬೇಸಿಗೆಯಲ್ಲಿ ಹೀಗೆ ಮಾಡಿದರೆ ಬೆವರಿನ ವಾಸನೆ ಬರುವುದಿಲ್ಲ…
ಇನ್ನು ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ಒಳಗೊಂಡಿರುವ ಮತಗಟ್ಟೆ ತಂಡವು ತೆರಳಿ, ಮತದಾನ ಗುರುತಿನ ಚೀಟಿ ಪರಿಶೀಲಿಸಲಾಗುತ್ತದೆ. ಬಳಿಕ ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ವೀಡಿಯೋಗ್ರಫಿ ಮೂಲಕ ಸೆರೆಹಿಡಿಯಲಾಗುತ್ತದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 3 =
Remember me
