ಬೆಂಗಳೂರು:ರಾಜ್ಯದಲ್ಲಿ ಅಬ್ಬರಿಸುತ್ತಿದ್ದ ಮಳೆ ಜೂ 16ರಿಂದ ಕ್ಷೀಣವಾಗಲಿದೆ.ಕಲಬುರಗಿ, ಕೊಪ್ಪಳ, ರಾಮನಗರ, ಶಿವಮೊಗ್ಗ, ಯಾದಗಿರಿ ವ್ಯಾಪ್ತಿಯ ಪ್ರದೇಶಗಳಲ್ಲಿ ಶನಿವಾರ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಿದೆ.
ಮುಂಗಾರು ಪ್ರವೇಶಿಸಿದ ದಿನದಿಂದಲೂ ರಾಜ್ಯದಲ್ಲಿ ನಿರಂತರವಾಗಿ ಮಳೆ ಬೀಳುತ್ತಿದೆ. ಐದು ವರ್ಷ ಬಳಿಕ 2024ರ ಜೂ 1ರಿಂದ ಜೂ 10ರವರೆಗೆ ವಾಡಿಕೆಗಿಂತ ಅಧಿಕ ಪ್ರಮಾಣದಲ್ಲಿ ಸುರಿದಿದೆ. ಕರಾವಳಿ, ಮಲೆನಾಡು, ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಸುರಿದಿತ್ತು. ಇದೀಗ ಮೂರು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಬೀದರ್​, ಕಲಬುರಗಿ, ವಿಜಯಪುರದಲ್ಲಿ ಜೂ 16ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅರ್ಲಟ್​ ನೀಡಲಾಗಿದೆ.
ಮುಂಗಾರು ಮಳೆಯೊಂದಿಗೆ ರಾಜ್ಯದಲ್ಲಿ ಹೆಚ್ಚಿದ ಡೆಂಘೆ- ಚಿಕೂನ್‌ಗುನ್ಯಾಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಮುಂದಿನ ಎರಡು ಸಾಧಾರಣ ಮಳೆ ಸುರಿಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
