ಬೆಂಗಳೂರು:ದೇವರು, ರಾಜ್ಯದ ಜನರು ಹಾಗೂ ತಂದೆ ತಾಯಿಯ ಆಶೀರ್ವಾದ, ವೈದ್ಯರ ಆರೈಕೆಯಿಂದ ನನಗೆ ಮೂರನೇ ಜನ್ಮ ಸಿಕ್ಕಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೃತಜ್ಞತಾಪೂರ್ವಕ ಮಾತುಗಳನ್ನು ಹೇಳಿದರು.ಆರೋಗ್ಯದ ಬಗ್ಗೆ ಯಾರೂ ನಿಷ್ಕಾಳಜಿ ವಹಿಸಬಾರದು. ಏನೇ ಸಮಸ್ಯೆ ಕಾಣಿಸಿಕೊಂಡರೂ ತಕ್ಷಣ ಎಚ್ಚೆತ್ತು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಿರಿ ಎಂದು ಜನತೆಯಲ್ಲಿ ವಿನಂತಿ ಮಾಡಿಕೊಂಡರು.ಅನಾರೋಗ್ಯದಿಂದ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಅವರು ಪೂರ್ಣ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.ತಮ್ಮ ಆರೋಗ್ಯ ಕೈತಪ್ಪಿ ಆಸ್ಪತ್ರೆಗೆ ದಾಖಲಾದ ಸಂದರ್ಭವನ್ನು ವಿವರಿಸಿದ ಅವರು, ಆ ದಿನ ನಾನು ಬಿಡದಿಯ ನನ್ನ ತೋಟದ ಮನೆಯಲ್ಲಿದ್ದೆ. ತಡರಾತ್ರಿ ನನ್ನ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿತು. ತಕ್ಷಣವೇ ಡಾ. ಸಿ.ಎನ್.ಮಂಜುನಾಥ್ ಅವರಿಗೆ ಕರೆ ಮಾಡಿ ಅವರ ಸಲಹೆ ಮೇರೆಗೆ ಅಪೋಲೋ ಆಸ್ಪತ್ರೆಯ ತಜ್ಞವೈದ್ಯರಾದ ಡಾ.ಸತೀಶ್ ಚಂದ್ರ ಅವರನ್ನು ಸಂಪರ್ಕ ಮಾಡಲಾಯಿತು. ಬಿಡದಿ ತೋಟದ ಮನೆಯಿಂದ ಕೇವಲ ಇಪ್ಪತ್ತು ನಿಮಿಷಗಳಲ್ಲಿ ಇಲ್ಲಿಗೆ ತಲುಪಿದೆ ಎಂದರು.ನಾನು ಆ ಸಂದರ್ಭದಲ್ಲಿ ಸ್ವಲ್ಪ ನಿರ್ಲಕ್ಷ್ಯ ಮಾಡಿದ್ದಿರೂ ಇವತ್ತು ಇಷ್ಟು ಸರಾಗವಾಗಿ ಮಾತಾಡಲು ಆಗುತ್ತಿರಲಿಲ್ಲ. ವೈದ್ಯರು ಸಹಾ ಬಹಳ ಕಾಳಜಿ ವಹಿಸಿದರು. ಆಸ್ಪತ್ರೆಗೆ ಬಂದ ಮರು ಕ್ಷಣವೇ ವೈದ್ಯರು ಚಿಕಿತ್ಸೆ ಆರಂಭ ಮಾಡಿದರು. ಅವರ ಆರೈಕೆ, ದೇವರ ದಯೆಯ ಫಲವಾಗಿ ನಾನೀಗ ನಿಮ್ಮೆಲ್ಲರ ಜತೆ ನಿರಾಯಾಸವಾಗಿ ಮಾತನಾಡುತ್ತಿದ್ದೇನೆ ಎಂದು ಭಾವುಕರಾದರು.ಅನಾರೋಗ್ಯ ಕಾಣಿಸಿಕೊಂಡಾಗ ಅಸಡ್ಡೆ ಬೇಡ. ಬಹಳ ಕಾಳಜಿ ಇರಲಿ, ಗೋಲ್ಡನ್ ಪಿರಿಯಡ್ ಬಗ್ಗೆ ಗಮನ ಇರಲಿ ಕುಮಾರಸ್ವಾಮಿ ಕಿವಿ ಮಾತು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − thirteen =
Remember me
