ವಿಜಯಪುರ:ಬೆಂಬಲ ಬೆಲೆ ಯೋಜನೆಯಲ್ಲಿ ಸರ್ಕಾರ ತೆರೆದಿರುವ ಖರೀದಿ ಕೇಂದ್ರಗಳಲ್ಲಿ ಇದೇ ಮೊದಲ ಬಾರಿಗೆ ‘ಫ್ರೂಟ್ಸ್ ’ ತಂತ್ರಾಂಶ ಬಳಕೆಯಾಗುತ್ತಿದ್ದು, ದಲ್ಲಾಳಿಗಳ ಹಾವಳಿಗೆ ಬ್ರೇಕ್ ಬೀಳಲಿದೆ. ರೈತರ ಹೆಸರು ನೋಂದಣಿ, ಬೆಳೆದ ಬೆಳೆ, ಬ್ಯಾಂಕ್ ಖಾತೆ ವಿವರ ನಮೂದಿಸಲು ಸರ್ಕಾರ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.
ಏನಿದು ತಂತ್ರಾಂಶ?: ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿಗಳ ಮಾಹಿತಿ ದಾಖಲಿಸುವ ತಂತ್ರಾಂಶವೇ ಫ್ರೂಟ್ಸ್. ಬೆಂಬಲ ಬೆಲೆ ಯೋಜನೆಯಲ್ಲಿ ರೈತರ ನೋಂದಣಿಗೆ ಈ ತಂತ್ರಾಂಶ ಅನುಷ್ಠಾನಗೊಳಿಸಲಾಗುತ್ತಿದೆ.
ರೈತರ ಹೆಸರು, ವಿಳಾಸ, ಜಾತಿ, ವಯಸ್ಸು, ಮೊಬೈಲ್ ಸಂಖ್ಯೆ, ಜಮೀನು ಹಾಗೂ ಬೆಳೆದಿರುವ ಬೆಳೆಯ ವಿವರಗಳು, ಬ್ಯಾಂಕ್ ಖಾತೆ ಮಾಹಿತಿಯನ್ನು ದತ್ತಾಂಶದಲ್ಲಿ ಸಂಗ್ರಹಿಸಲಾಗುತ್ತದೆ. ಮತ್ತೊಂದು ವಿಶೇಷವೆಂದರೆ ಬೆಳೆ ವಿಸ್ತೀರ್ಣಕ್ಕನುಗುಣವಾಗಿ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಬಹುದಾದ ಗರಿಷ್ಠ ಪ್ರಮಾಣವನ್ನೂ ತಂತ್ರಾಂಶದಲ್ಲಿ ತೋರಿಸಲಾಗುತ್ತದೆ.
ರೈತರಿಗೆ ಅನುಕೂಲ ಏನು?: ಖರೀದಿ ಕೇಂದ್ರದಲ್ಲಿ ಬೆಳೆ ಖರೀದಿಸಿದ ಬಗ್ಗೆ ರೈತರಿಗೆ ಸ್ವೀಕೃತಿ ನೀಡಲಾಗುತ್ತದೆ. ಹಣವನ್ನು ರೈತರ ನೋಂದಾಯಿತ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ. ಇಲ್ಲಿ ಖರೀದಿ ಕೇಂದ್ರದ ಸಿಬ್ಬಂದಿ ಯಾವುದೇ ಮೋಸ, ವಂಚನೆ ಮಾಡಲು ಸಾಧ್ಯವಿಲ್ಲ.
ಬೆಳಗಾವಿ ಮೊದಲ ಸ್ಥಾನ: ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಸೇರಿ ಸರ್ಕಾರದ ವಿವಿಧ ಸೌಲಭ್ಯ ಪಡೆದುಕೊಳ್ಳಲು ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಾಯಿಸಿಕೊಂಡಿದ್ದು, ಈ ಯೋಜನೆ ಅನುಷ್ಠಾನದಲ್ಲಿ ಬೆಳಗಾವಿ ಜಿಲ್ಲೆ (5.64 ಲಕ್ಷ) ಮೊದಲ ಸ್ಥಾನದಲ್ಲಿದೆ. ತುಮಕೂರು 3.40 ಲಕ್ಷ, ಕಲಬುರಗಿ 3.05 ಲಕ್ಷ, ವಿಜಯಪುರ 2.96 ಲಕ್ಷ, ಬಾಗಲಕೋಟೆ 2.15ಲಕ್ಷ, ಮಂಡ್ಯ ಜಿಲ್ಲೆಯಲ್ಲಿ 2.96 ಲಕ್ಷ ಹೀಗೆ ರಾಜ್ಯದಲ್ಲಿ ಒಟ್ಟು 59.4 ಲಕ್ಷ ರೈತರು ನೋಂದಾಯಿಸಿಕೊಂಡಿದ್ದಾರೆ.
ಹಿಂದಿನ ವ್ಯವಸ್ಥೆ ಹೇಗಿತ್ತು?
ಖರೀದಿ ಕೇಂದ್ರಗಳಲ್ಲಿ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿ ನೀಡಿದರೆ ಸಾಕಿತ್ತು. ಇದರಿಂದಾಗಿ ಒಂದೇ ಪಹಣಿಯನ್ನು ಬೇರೆಬೇರೆ ರೈತರು, ದಲ್ಲಾಳಿಗಳು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದವು. ಈಗ ತಂತ್ರಾಂಶ ಬಳಕೆಯಿಂದಾಗಿ ಅವ್ಯವಹಾರಕ್ಕೆ ಅವಕಾಶ ಇರುವುದಿಲ್ಲ.
ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿ ಕೇಂದ್ರ ತೆರೆದಿರುವ ಸರ್ಕಾರ, ಈ ಬಾರಿ ಫ್ರೂಟ್ಸ್ ತಂತ್ರಾಂಶದ ಮೂಲಕ ರೈತರ ನೋಂದಣಿ ಮಾಡುವಂತೆ ಸೂಚಿಸಿದೆ. ಅದರಂತೆ ಜಿಲ್ಲಾಮಟ್ಟದಲ್ಲಿ ಖರೀದಿ ಕೇಂದ್ರದ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ.
|ಡಿ.ಎಂ.ಲಿಂಗರಾಜು ವ್ಯವಸ್ಥಾಪಕ, ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ವಿಜಯಪುರ
| ಹೀರಾನಾಯ್ಕ ಟಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 7 =
Remember me
