ಬೆಂಗಳೂರು:ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷರಾಗಿ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ ಪದಗ್ರಹಣ ಕಾರ್ಯ ಕ್ರಮಕ್ಕೆ ಭರದ ತಯಾರಿ ನಡೆದಿದೆ.
ಸಮಾರಂಭ ಹೇಗಿರಬೇಕೆಂಬ ಬಗ್ಗೆ ಸ್ವತಃ ಡಿ.ಕೆ. ಶಿವಕುಮಾರ್ ಕಲ್ಪನೆ ಕಟ್ಟಿಕೊಂಡು ಅನುಷ್ಠಾನಕ್ಕೆ ಮುಂದಾಗಿದ್ದಾರೆ. ಲಾಕ್​ಡೌನ್ ಸಡಿಲಿಕೆ ವಿಚಾರದಲ್ಲಿ ಸೋಮವಾರ ಸರ್ಕಾರದ ತೀರ್ಮಾನ ನೋಡಿಕೊಂಡು ಪದಗ್ರಹಣ ದಿನಾಂಕ ಘೋಷಿಸಲು ಡಿಕೆಶಿ ನಿರ್ಧರಿಸಿದ್ದು, ಸದ್ಯಕ್ಕೆ ಜೂ.7ಕ್ಕೆ ಕಾರ್ಯಕ್ರಮ ನಡೆಸಲು ಉದ್ದೇಶಿಸಿದ್ದಾರೆ. ಕೆಪಿಸಿಸಿ ಕಚೇರಿ ಮುಂದೆ ನಡೆಯುವ ಕಾರ್ಯಕ್ರಮದಲ್ಲಿ ಪಕ್ಷದ ಎಲ್ಲ ಶಾಸಕರು, ಪರಿಷತ್ ಸದಸ್ಯರು, ಹಿರಿಯ ನಾಯಕರು ಸೇರಿ 150 ಮಂದಿ ಮಾತ್ರ ಹಾಜರಿರುವರು. ಉಳಿದವರೆಲ್ಲರೂ ಜಿಲ್ಲಾ-ತಾಲೂಕು ಕೇಂದ್ರ, ಗ್ರಾಮ ಪಂಚಾಯಿತಿಯಲ್ಲೇ ಇದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ.
ಕಾರ್ಯಕ್ರಮದಲ್ಲಿ ಪಾಲ್ಗೊಂಡವರೆಲ್ಲ ಪಕ್ಷದ ಸಿದ್ಧಾಂತ ಒಪ್ಪಿ ಕೆಲಸ ಮಾಡುವುದಾಗಿ ಪ್ರಮಾಣ ಸ್ವೀಕರಿಸಿ, ಸಂವಿಧಾನದ ಮುನ್ನುಡಿ ಓದಲಿದ್ದಾರೆ. ದೆಹಲಿ ನಾಯಕರಿಗೂ ಆಹ್ವಾನ ನೀಡುತ್ತಿದ್ದು, ಅವರ ಪಾಲ್ಗೊಳ್ಳುವಿಕೆ ಸಮಾರಂಭದ ತೂಕ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿವೆ ಎನ್ನಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
