ಬೆಂಗಳೂರು :ಕಾಫಿ ತೋಟದ ಮಧ್ಯೆ ಗಾಂಜಾ ಗಿಡ ಬೆಳೆದಿದ್ದ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಕೆ.ಎಂ. ರಾಜೇಂದ್ರ (55) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ತೋಟದಲ್ಲಿ ಎಂಟು ಗಾಂಜಾ ಗಿಡ ಬೆಳೆದಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡು ಸ್ಥಳವನ್ನು ಮಹಜರು ಮಾಡಿದ್ದಾರೆ. ಆದರೆ, ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಮುಂದಿನ ವಿಚಾರಣೆಗೆ ಅರ್ಜಿದಾರ ಅಗತ್ಯವಿಲ್ಲವಾಗಿದೆ. ಹಾಗಾಗಿ, ಆತನಿಗೆ ಜಾಮೀನು ನೀಡಲಾಗುತ್ತಿದೆ ಎಂದು ಆದೇಶದಲ್ಲಿ ನ್ಯಾಯಪೀಠ ಹೇಳಿದೆ.
ಆರೋಪಿಯು ಎರಡು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಮತ್ತ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ (ಶ್ಯೂರಿಟಿಗಳು) ನೀಡಬೇಕು. ಇದೇ ಮಾದರಿಯ ಅಪರಾಧಗಳಲ್ಲಿ ಮುಂದಿನ ದಿನಗಳಲ್ಲಿ ಭಾಗಿಯಾಗಬಾರದು ಎಂದು ಹೈಕೋರ್ಟ್ ಷರತ್ತು ವಿಧಿಸಿದೆ. ಆರೋಪಿ ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದತಿಗೆ ತನಿಖಾಧಿಕಾರಿಗಳು ವಿಚಾರಣಾ ನ್ಯಾಯಾಲಯವನ್ನು ಕೋರಬಹುದು.
ಇನ್ನೂ ಆರೋಪಿ ಒದಗಿಸುವ ಶ್ಯೂರಿಟಿಗಳ ವಿಳಾಸ ಮತ್ತು ದಾಖಲೆಗಳ ನೈಜತೆಯನ್ನು ಪರಿಶೀಲಿಸಲು ವಿಚಾರಣಾ ನ್ಯಾಯಾಲಯ ತನಿಖಾಧಿಕಾರಿಗೆ ನಿರ್ದೇಶಿಸಬಹುದು.ಒಂದೊಮ್ಮೆ ಅಂತಹ ಸೂಚನೆ ವಿಚಾರಣಾ ನ್ಯಾಯಾಲಯ ನೀಡಿದರೆ, ತನಿಖಾಧಿಕಾರಿಯು ಐದು ದಿನದಲ್ಲಿ ವರದಿ ಸಲ್ಲಿಸಬೇಕು. ಆ ವರದಿ ಬಗ್ಗೆ ವಿಚಾರಣಾ ನ್ಯಾಯಾಲಯ ತೃಪ್ತಿದಾಯಕವಾದಲ್ಲಿ ಅರ್ಜಿದಾರನನ್ನು ಜಾಮೀನು ಮೇಲೆ ಬಿಡುಗಡೆ ಮಾಡಬಹುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಪ್ರಕರಣವೇನು?ಖಚಿತ ಮಾಹಿತಿ ಮೇರೆಗೆ ಚಿಕ್ಕಮಗಳೂರು ಸಿಇಎನ್ ಠಾಣಾ ಪೊಲೀಸರು, 2024ರ ಮಾ.6ರಂದು ಬೆಳಗ್ಗೆ 8 ಗಂಟೆಗೆ ಆವತಿ ಹೋಬಳಿಯ ಕೆಳಹೋಲಗದ್ದೆ ಗ್ರಾಮದ ನಿವಾಸಿ ರಾಜೇಂದ್ರ ಎಂಬಾತ ಕಾಫಿ ತೋಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಕಾಫಿ ಗಿಡಗಳ ಮಧ್ಯೆ ಮಾರಾಟ ಮಾಡುವ ಉದ್ದೇಶದಿಂದ 8 ಗಾಂಜಾ ಗಿಡ ಬೆಳೆದಿರುವುದು ಕಂಡುಬಂದಿತ್ತು.
ಅದರಂತೆ ಒಂದು ಸಾವಿರ ರೂ ಬೆಲೆಬಾಳುವ 100 ಗ್ರಾಂ ನಷ್ಟು ಗಾಂಜಾ ಗಿಡ, ಅದ ಹಸಿ ಬೇರು, ಕಾಂಡಾ, ಕಡ್ಡಿ ಮತ್ತು ಸೊಪ್ಪು, ಹೂವು ಮೊಗ್ಗು ಅನ್ನು ವಶಪಡಿಸಿಕೊಂಡಿದ್ದ ಪೊಲೀಸರು ರಾಜೇಂದ್ರ ಅವರನ್ನು ಬಂಧಿಸಿದ್ದರು. ಗಾಂಜಾ ಗಿಡ ಬೆಳೆಸಿಕೊಡುವಂತೆ ಹೇಳಿದ್ದ ಅದೇ ಗ್ರಾಮದ ಲಕ್ಷ್ಮಣ್ ಎಂಬಾತನನ್ನು ಎರಡನೇ ಆರೋಪಿಯನ್ನಾಗಿಸಿದ್ದರು. ಜಾಮೀನು ಕೋರಿ ರಾಜೇಂದ್ರ ಹೈಕೋರ್ಟ್ ಮೊರೆ ಹೋಗಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
