ಮಂಡ್ಯ:ಕಳೆದ ವರ್ಷ ಸರಿಯಾಗಿ ಮಳೆಯಾಗದೇ ಜೀವಕಳೆ ಕಳೆದುಕೊಂಡಿದ್ದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜಸಾಗರ ಜಲಾಶಯ (ಕೆಆರ್​ಎಸ್​) ಈ ಬಾರಿ ವರುಣನ ಕೃಪೆಯಿಂದ ತುಂಬಿ ತುಳುಕುತ್ತಿದೆ.
ಹೌದು, ಕೆಆರ್​ಎಸ್​ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದ ನೀರಿನ ಮಟ್ಟ 124 ಅಡಿಗೆ ಏರಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಸಾಕಷ್ಟು ಮಳೆಯಾದ್ದರಿಂದ ಒಳಹರಿವಿನ ಪ್ರಮಾಣ ಹೆಚ್ಚಾಗಿ ಡ್ಯಾಂ ತುಂಬಿದೆ. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆ ಒಳಹರಿವು ಕ್ಷೀಣಿಸಿದ್ದು, ಹೊರ ಹರಿವಿನ ಪ್ರಮಾಣವನ್ನು ಇಳಿಸಲಾಗಿದೆ. ನಿನ್ನೆ 40 ಸಾವಿರ ಕ್ಯೂಸೆಕ್ ಇದ್ದ ಒಳ ಹರಿವಿನ ಪ್ರಮಾಣ, ಇದೀಗ 31 ಸಾವಿರ ಕ್ಯೂಸೆಕ್​ಗೆ ತಗ್ಗಿದೆ.
ಕೆಆರ್​ಎಸ್​ ಡ್ಯಾಂ ತುಂಬಿರುವುದು ರಾಜ್ಯದ ಜನತೆಯ ಪಾಲಿಗೆ ಅದರಲ್ಲೂ ಬೆಂಗಳೂರಿನ ಜನತೆಗೆ ಇದಕ್ಕಿಂತ ಖುಷಿಯ ಸಂಗತಿ ಮತ್ತೊಂದಿಲ್ಲ. ಏಕೆಂದರೆ, ಕಳೆದ ವರ್ಷ ಹನಿ ಹನಿ ನೀರಿಗೂ ರಾಜ್ಯ ರಾಜಧಾನಿ ಜನರು ಪರದಾಡಿದ್ದರು. ಎಷ್ಟೋ ಮಂದಿ ನೀರಿಲ್ಲದೆ ಬೆಂಗಳೂರನ್ನೇ ತೊರೆದಿದ್ದರು. ಕಾವೇರಿ ನೀರಿನಲ್ಲಿ ವಾಹನಗಳನ್ನು ಸ್ವಚ್ಛಗೊಳಿಸಿದ್ದಕ್ಕೆ ಬಿಬಿಎಂಪಿ ದಂಡ ವಿಧಿಸಿದ್ದನ್ನು ಮರೆಯುವಂತಿಲ್ಲ. ಒಂದು ಬಿಂದಿಗೆ ನೀರಿಗೂ ಗಂಟೆಗಟ್ಟಲೇ ಕಾಯಬೇಕಾದ ಸ್ಥಿತಿ ಕಳೆದ ಬೇಸಿಗೆಯಲ್ಲಿ ಎದುರಾಗಿತ್ತು. ಆದರೆ, ಈ ಬಾರಿ ವರುಣ ಕೃಪೆ ತೋರಿದ್ದು, ಕೆಆರ್​ಎಸ್​ ಡ್ಯಾಂಗೆ ಮತ್ತೆ ಜೀವಕಳೆ ಬಂದಿದೆ. ಅಲ್ಲದೆ, ರೈತರ ಮುಖದಲ್ಲೂ ಮಂದಹಾಸ ಮೂಡಿದೆ.
ಬರದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಿದ್ದಕ್ಕೆ ಕೆಲವು ತಿಂಗಳುಗಳು ಹಿಂದೆ ರೈತರು ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆಯನ್ನು ನಡೆಸಿದ್ದರು. ಬೆಳೆಗೆ ನೀರಿಲ್ಲದೆ ಕಾವೇರಿ ಜಲಾನಯನ ಪ್ರದೇಶದ ರೈತರು ಮೋಡದ ಕಡೆ ಮುಖ ಮಾಡಿ ಯಾವಾಗ ಮಳೆ ಬರುತ್ತದೆ ಎಂದು ಎದುರು ನೋಡುತ್ತಿದ್ದರು. ಆದರೆ, ವರುಣ ತನ್ನ ಮುನಿಸನ್ನು ದೂರ ಮಾಡಿದ್ದು, ಮತ್ತೆ ಕೃಪೆ ತೋರಿದ್ದಾನೆ. ಭಾರಿ ಮಳೆಯಿಂದ ಕೆಆರ್​ಎಸ್​ ಡ್ಯಾಂ ತುಂಬಿದ್ದು ಜನರ ನೀರಿನ ಬವಣೆ ನೀಗಿದೆ.
KRS ಡ್ಯಾಂನ ಇಂದಿನ ನೀರಿನ‌ ಮಟ್ಟ* ಗರಿಷ್ಠ ಮಟ್ಟ: 124.80 ಅಡಿ* ಇಂದಿನ ಮಟ್ಟ: 124.10 ಅಡಿ* ಗರಿಷ್ಠ ಸಾಂದ್ರತೆ: 49.453 ಟಿಎಂಸಿ* ಇಂದಿನ ಸಾಂದ್ರತೆ: 48.475 ಟಿಎಂಸಿ* ಒಳ ಹರಿವು ಪ್ರಮಾಣ: 31,852 ಕ್ಯೂಸೆಕ್* ಹೊರ ಹರಿವು ಪ್ರಮಾಣ: 11,911 ಕ್ಯೂಸೆಕ್
ಟಿ20 ವಿಶ್ವಕಪ್​ನಲ್ಲಿ ಭಾರಿ ಹಗರಣ! ಮಹಾ ಮೋಸ ಬಯಲಿಗೆಳೆಯಲು ತನಿಖೆಗೆ ಆದೇಶಿಸಿದ ಐಸಿಸಿ

ದರ್ಶನ್​​ ಬಂಧನ​ ಪ್ರಕರಣ! ವಿಜಯಲಕ್ಷ್ಮೀ ಅವರು… ಸ್ಫೋಟಕ ಹೇಳಿಕೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
