ಬೆಂಗಳೂರು :ಕರೊನಾ ಮತ್ತಷ್ಟು ಇಳಿಮುಖವಾಗುತ್ತಿರುವ ಕಾರಣ, ರಾಜ್ಯದಲ್ಲಿ ಹೆಚ್ಚುವರಿ ಚಟುವಟಿಕೆಗಳಿಗೆ ಅನುಮತಿ ನೀಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ. ಧಾರ್ಮಿಕ ಸ್ಥಳಗಳ ಕಾರ್ಯಚಟುವಟಿಕೆಗೆ ಸಂಬಂಧಿಸಿದಂತೆ ಮತ್ತು ಇತರ ಕೆಲವು ವಿನಾಯಿತಿಗಳನ್ನು ಸರ್ಕಾರ ಪ್ರಕಟಿಸಿದೆ.
ಪೂಜಾ ಸ್ಥಳಗಳು (ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳು) ತೆರೆಯಲು ಅನುಮತಿ ನೀಡಲಾಗಿದೆ ಮತ್ತು ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಭಾನುವಾರದಿಂದ ಆರಂಭಿಸಲು ಅನುಮತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಕೋವಿಡ್ ಸೂಕ್ತ ನಡವಳಿಕೆ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾದ ಎಸ್ಒಪಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಷರತ್ತು ವಿಧಿಸಲಾಗಿದೆ. ಆದಾಗ್ಯೂ, ಜಾತ್ರೆಗಳು, ದೇವಾಲಯ ಉತ್ಸವಗಳು, ಮೆರವಣಿಗೆಗಳು, ಸಭೆಗಳಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಇದನ್ನೂ ಓದಿ:ಸಿಎಂ ಬದಲಾವಣೆ ಆಡಿಯೋ ಸಂದೇಶ ತನಿಖೆಗೆ ರಮಾನಾಥ ರೈ ಒತ್ತಾಯ
ರಾಜ್ಯದಲ್ಲಿ ಅನ್​ಲಾಕ್​ ಪ್ರಕ್ರಿಯೆ ಸಂಬಂಧವಾಗಿ ಮತ್ತೊಂದು ಸುತ್ತೋಲೆ ಪ್ರಕಟಿಸಿರುವ ಸರ್ಕಾರ, ಮನೋರಂಜನಾ ಉದ್ಯಾನವನಗಳು ಮತ್ತು ಅಂತಹುದೇ ಸ್ಥಳಗಳನ್ನು ತೆರೆಯಲೂ ಸಹ ಅನುಮತಿ ನೀಡಿದೆ. ಆದರೆ, ಜಲ ಕ್ರೀಡೆ ಅಥವಾ ಜಲ ಸಂಬಂಧಿತ ಸಾಹಸ ಚಟುವಟಿಕೆಗಳಿಗೆ ನಿರ್ಬಂಧ ಮುಂದುವರಿಸಲಾಗಿದೆ.
2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ : ಬಿಎಸ್​ವೈ
ಒಲಿಂಪಿಕ್ಸ್​: ಮೆಡಲ್ ರೌಂಡ್​​ಗೆ ಭಾರತದ ಸೌರಭ್ ಚೌಧರಿ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 1 =
Remember me
