ಬೆಂಗಳೂರು:ನೇಮಕಾತಿ ಆದೇಶ ಪತ್ರ ವಿತರಣೆಗೆ ಆಗ್ರಹಿಸಿ ಪದವೀಧರ ಪ್ರಾಥಮಿಕ ಶಿಕ್ಷಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಧರಣಿ 2ನೇ ದಿನವೂ ಮುಂದುವರಿದಿದೆ.
ಮಂಗಳವಾರ ದಿನಪೂರ್ತಿ ಸುರಿದ ಮಳೆಯ ನಡುವೆಯೂ ಅಭ್ಯರ್ಥಿಗಳು ಜಗ್ಗದೆ ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಮಾಜಿ ಎಂಎಲ್‌ಸಿ ಪುಟ್ಟಣ್ಣ ಸೇರಿ ಹಲವು ಜನಪ್ರತಿನಿಧಿಗಳು ಭೇಟಿ ನೀಡಿ ಅಹವಾಲು ಆಲಿಸಿದ್ದಾರೆ. ನೇಮಕಾತಿ ವಿಚಾರವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಭರವಸೆ ನೀಡಿದರು.
ಸಚಿವರ ಭೇಟಿ ಮಾಡಿದ ನಿಯೋಗ:ಪ್ರತಿಭಟನಾನಿರತ ಪ್ರತಿನಿಧಿಗಳ ನಿಯೋಗವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ನೇಮಕಾತಿ ಆದೇಶ ಪತ್ರ ವಿತರಣೆಗೆ ಮನವಿ ಮಾಡಿದರು. ಆಯ್ಕೆ ಪಟ್ಟಿಯಲ್ಲಿ ಹೆಸರು ಪ್ರಕಟಗೊಂಡ ಬಳಿಕ ಇರುವ ಕೆಲಸವನ್ನು ಕಳೆದುಕೊಂಡು ಜೀವನ ನಿರ್ವಹಣೆ ಅತಂತ್ರವಾಗಿದೆ. ಇತ್ತ ಅಸಲಿ ದಾಖಲಾತಿಗಳು ಸರ್ಕಾರದ ಬಳಿ ಇರುವುದರಿಂದ ಬೇರೆ ಕಡೆ ಕೆಲಸಕ್ಕೆ ಸೇರಲು ಕೂಡ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೂಡಲೇ ಆದೇಶ ಪತ್ರ ನೀಡಿದರೆ ಅನುಕೂಲವಾಗಲಿದೆ ಎಂದು ಒತ್ತಾಯಿಸಿದರು.
“13ರಂದು ಹೈಕೋರ್ಟ್‌ನಲ್ಲಿ ನೇಮಕಾತಿಗೆ ಸಂಬಂಧಿಸಿದ ವಿಚಾರಣೆ ಇದೆ. ನ್ಯಾಯಾಲಯದ ತೀರ್ಪು ಯಾವ ರೀತಿಯಲ್ಲಿ ಪ್ರಕಟವಾಗಲಿದೆ ಎಂಬುದನ್ನು ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳುವುದಾಗಿ’ ಸಚಿವರು ಭರವಸೆ ನೀಡಿದರು. ಇದಕ್ಕೆ ಒಪ್ಪದ ಪ್ರತಿಭಟನಾಕಾರರು, ಹೋರಾಟ ಮುಂದುವರಿಸುವುದಾಗಿ ಪ್ರತಿಕ್ರಿಯಿಸಿದರು.
ಅನಿರ್ದಿಷ್ಟಾವಧಿ ಹೋರಾಟಕ್ಕೆ ನಿರ್ಧಾರ: ಧರಣಿ ನಡೆಸಲು ಪೊಲೀಸರಿಂದ ಸದ್ಯ ಜು.5ರವರೆಗೆ ಮಾತ್ರ ಅನುಮತಿ ಪಡೆದುಕೊಳ್ಳಲಾಗಿದೆ. ಮತ್ತೊಮ್ಮೆ ಅನುಮತಿ ಪಡೆದು ಹೋರಾಟ ಮುಂದುವರಿಸಲಾಗುವುದು. ಹೈಕೋರ್ಟ್ ವಿಚಾರಣೆ ಮಾತ್ರವಲ್ಲ, ತೀರ್ಪು ಪ್ರಕಟವಾಗುವ ತನಕ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:18 + sixteen =
Remember me
