ಬಳ್ಳಾರಿ:ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ಅರುಣಾರಿಗೆ ಹೈಕೋರ್ಟ್​ ಬಿಗ್​ ರಿಲೀಫ್​ ನೀಡಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣದಿಂದ ಅರುಣಾರನ್ನು ಕೈಬಿಡುವಂತೆ ಆದೇಶ ಹೊರಡಿಸಿದೆ.
ಈ ಹಿಂದೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್​ ಪುರಸ್ಕರಿಸಿದೆ. ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಅಕ್ರಮ ಗಣಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪಪಟ್ಟಿ ಸಲ್ಲಿಸಿತ್ತು. ಇದರಲ್ಲಿ ಜನಾರ್ದನ ರೆಡ್ಡಿ ಮೊದಲನೆ ಆರೋಪಿ, ಅವರ ಪತ್ನಿ ಅರುಣಾ ಎರಡನೇ ಆರೋಪಿಯಾಗಿದ್ದರು.
ಇದನ್ನೂ ಓದಿರಿ:ನಾವಿಬ್ಬರೂ ಈಗಾಗಲೇ ಅಪ್ಪ-ಅಮ್ಮ: ಐಂದ್ರಿತಾ-ದಿಗಂತ್ ಅಚ್ಚರಿಯ ಹೇಳಿಕೆ

ಇದನ್ನು ಪ್ರಶ್ನಿಸಿ ಅರುಣಾ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ರೆಡ್ಡಿ ಪತ್ನಿಯನ್ನ ಪ್ರಕರಣದಿಂದ‌ ಕೈಬಿಟ್ಟಿತ್ತು. ಇದನ್ನು ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಸೋಮವಾರ (ಫೆ.22) ಅಂತಿಮ ಆದೇಶ ಹೊರಡಿಸಿದ ಹೈಕೋರ್ಟ್, ಸಿಬಿಐ ವಿಷೇಶ ನ್ಯಾಯಾಲಯದ ಆದೇಶವನ್ನು ಪುರಸ್ಕರಿಸಿದ್ದು, ರೆಡ್ಡಿ ಪತ್ನಿಯನ್ನು ಪ್ರಕರಣದಿಂದ ಕೈಬಿಟ್ಟಿದೆ.(ದಿಗ್ವಿಜಯ ನ್ಯೂಸ್​)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಡಿಮಾರ್ಟ್​ನಿಂದ ಮನೆಗೆ ಮರಳಿದ ಮಹಿಳೆಗೆ ಶಾಕ್​: ಪತಿಯ ಸ್ಥಿತಿ ಕಂಡು ಕುಸಿದುಬಿದ್ದ ಪತ್ನಿ!

ಬಾಂಬೆ ಬೇಗಮ್ಸ್​ನಲ್ಲಿ ಕನ್ನಡತಿ ಆದ್ಯಾ ಆನಂದ್…

ಕೇಂದ್ರ ಸಚಿವರ ಕಾರನ್ನು ಓವರ್​ಟೇಕ್​ ಮಾಡಿದ ಪ್ರವಾಸಿಗರಿಗೆ ಕಾದಿತ್ತು ಬಿಗ್​ ಶಾಕ್​..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − twelve =
Remember me
