ನವದೆಹಲಿ:ಬಳ್ಳಾರಿಗೆ ಭೇಟಿ ನೀಡಲು ಅವಕಾಶ ಕೋರಿ ಅಕ್ರಮ ಗಣಿಗಾರಿಕೆ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮನವಿ ಬಗ್ಗೆ ಸುಪ್ರೀಂಕೋರ್ಟ್ ಶುಕ್ರವಾರ ಬೆಳಗ್ಗೆ ಆದೇಶ ಪ್ರಕಟಿಸಲಿದೆ.
ಜನಾರ್ದನ ರೆಡ್ಡಿ ಪುತ್ರಿ 2 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದು, ಅವರೊಂದಿಗೆ ನಾಲ್ಕು ವಾರಗಳ ಕಾಲ ಬಳ್ಳಾರಿಯಲ್ಲಿ ವಾಸ್ತವ್ಯ ಹೂಡಬೇಕೆಂದು ಬಯಸಿದ್ದಾರೆ. ಇದಕ್ಕೆ ನ್ಯಾಯಾಲಯ ಅವಕಾಶ ಮಾಡಿಕೊಡಬೇಕು ಎಂದು ರೆಡ್ಡಿ ಪರ ವಕೀಲೆ ಮೀನಾಕ್ಷಿ ಆರೋರಾ ನ್ಯಾ. ಎಂ.ಆರ್. ಶಾ ಮತ್ತು ನ್ಯಾ ಕೃಷ್ಣ ಮುರಾರಿ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ವಿನಂತಿಸಿಕೊಂಡರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಈ ವಿಷಯದ ಬಗ್ಗೆ ಸಿಬಿಐ ಪರಿಶೀಲನೆ ನಡೆಸಿ ಶುಕ್ರವಾರ ಬೆಳಗ್ಗೆ ವರದಿ ನೀಡಲಿ. ನಂತರ ನಾವು ನಮ್ಮ ತೀರ್ಮಾನ ಪ್ರಕಟಿಸುತ್ತೇವೆ” ಎಂದು ತಿಳಿಸಿತು.
ಅಕ್ರಮ ಗಣಿಗಾರಿಕೆ ಪ್ರಕರಣದ ಬಗ್ಗೆ ಹೈದ್ರಾಬಾದ್​ನ ಸ್ಥಳೀಯ ನ್ಯಾಯಾಲಯ ವಿನಾಕಾರಣ ವಿಳಂಬ ಮಾಡುತ್ತಿರುವ ಬಗ್ಗೆ ಹಿಂದಿನ ವಿಚಾರಣೆ ವೇಳೆ ಕೆಂಡಕಾರಿದ್ದ ಇದೇ ನ್ಯಾಯಪೀಠ, ತ್ವರಿತಗತಿಯಲ್ಲಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡುವಂತೆ ಸೂಚಿಸಿದ್ದು ಇಲ್ಲಿ ಉಲ್ಲೇಖಾರ್ಹ.
ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್

ಕಾಂಡೋಮ್​ ಬೇಕಾ ಎಂದು ವಿದ್ಯಾರ್ಥಿನಿಯರನ್ನು ಕೇಳಿದ ಮಹಿಳಾ ಅಧಿಕಾರಿಗೆ ಎದುರಾಯ್ತು ಸಂಕಷ್ಟ!

ಸರ್ಕಾರಿ ಪ್ರಾಯೋಜಿತ ಬೈಕ್​ ಸವಾರಿ ವೇಳೆ ದುರಂತ ಸಾವಿಗೀಡಾದ ಭಾರತದ ಖ್ಯಾತ ಯೂಟ್ಯೂಬರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − nine =
Remember me
