ಬೆಂಗಳೂರು:ಪಿಎಸ್​ಐ ಹಗರಣದ(PSI Scam)ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್(Dr.G Parameshwar), ಈ ಪ್ರಕರಣ ಈಗಲೂ ಕೋರ್ಟ್​​ನಲ್ಲಿದೆ, ಇದರ ಬಗ್ಗೆ ನ್ಯಾಯಾಲಯ ಏನು ಹೇಳಲಿದೆ ಎಂಬುದನ್ನು ನೋಡಬೇಕು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.
ಇದನ್ನೂ ಓದಿ:ಗಾಢ ನಿದ್ರೆಯಲ್ಲಿದ್ದ ಪೋಷಕರು, 8ನೇ ಮಹಡಿಯಿಂದ ಬಿದ್ದು ಮಗು ಸಾವು
“ಪಿಎಸ್ಐ ಹಗರಣದಲ್ಲಿ ಭ್ರಷ್ಟಾಚಾರ(Corruption)ನಡೆದಿದೆ ಎಂಬುದು ಸಾಬೀತಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು, ಕ್ರಮ‌ ತೆಗೆದುಕೊಳ್ಳಬೇಕು. ನ್ಯಾಯಾಲಯ ಏನು ಆದೇಶ ನೀಡಲಿದೆಯೋ ಅದನ್ನು ನಾವು ಅನುಸರಿಸಬೇಕು. ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನೀಡುವ ಬಗ್ಗೆ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ನನಗೆ ತಿಳಿದಿಲ್ಲ. ನಾನು ಅದರ ಬಗ್ಗೆ ನೇರವಾಗಿ ಏನೂ ಹೇಳಲಿಕ್ಕೆ ಸಾಧ್ಯವಿಲ್ಲ. ಅಧಿಕಾರಿಗಳ ಜತೆ ಚರ್ಚಿಸಿ, ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.
ಇದನ್ನೂ ಓದಿ:ಜನರಿಗೆ ಬೇಕಾಗಿರುವುದು ಅಕ್ಕಿ ಹಣ ಅಲ್ಲ; ಸಿ.ಟಿ. ರವಿ ಹೇಳಿಕೆಗೆ ಸಚಿವ ಜಾರ್ಜ್​ ತಿರುಗೇಟು
ಇನ್ನು ಮತಾಂತರ ಕಾಯ್ದೆ ನಿಷೇಧದ ಬಗ್ಗೆ ನಡೆಯುತ್ತಿರುವ ಗೊಂದಲಗಳ ಬಗ್ಗೆ ಪ್ರಶ್ನಿಸಿದಾಗ, “ಈ ಹಿಂದೆ ಕಾನೂನು ವಿರುದ್ಧದ ಕೆಲವೊಂದು ಮುನ್ನಡೆಗಳು ಇತ್ತು. ಸಾಂವಿಧಾನಿಕವಾಗಿ ಏನು ಇಲ್ಲವೋ ಅದನ್ನ ಸರಿಪಡಿಸುತ್ತೇವೆ. ಸಾಂವಿಧಾನಿಕವಾಗಿ ಏನು ಆಗಬೇಕೋ ಅದರ ಕಡೆ ಹೆಚ್ಚು ಒತ್ತು ನೀಡಲಾಗುತ್ತದೆ. ಈ ಹಿಂದೆಯೂ ಮತಾಂತರ(Conversion Rule)ಇತ್ತು! ಸಾಂವಿಧಾನಿಕವಾಗಿ ಏನೆಲ್ಲಾ ಮಾಡಬೇಕು ಅದನ್ನ ಮಾಡುತ್ತೀವಿ” ಎಂದು ಹೇಳಿದರು.
ಬಿಜೆಪಿಯಲ್ಲಿ ಅಜೆಂಡಾ ಮತ್ತು ಹಿಡನ್ ಅಜೆಂಡಾ ಎರಡೂ ಇದೆ: ಎಚ್.ಕೆ. ಪಾಟೀಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + nine =
Remember me
