ತುಮಕೂರು:ಕಾಂಗ್ರೆಸ್​ನಲ್ಲಿ 10 ಮಂದಿ ಮುಖ್ಯಮಂತ್ರಿ ರೇಸ್​ನಲ್ಲಿದ್ದಾರೆ. ಆ ಪೈಕಿ ನಾನು ಒಬ್ಬ ಎಂದು ಹೇಳುವ ಮೂಲಕ ಸಿಎಂ ಆಗುವ ಆಸೆಯನ್ನ ಪರೋಕ್ಷವಾಗಿ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಬಿಚ್ಚಿಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾಜಿ ಡಿಸಿಎಂ ಡಾ. ಪರಮೇಶ್ವರ್ ಮಾತನಾಡುತ್ತಾ, 113 ಸ್ಥಾನಕ್ಕಿಂತ ಹೆಚ್ಚು ಸ್ಥಾನ ಪಡೆದು ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ, ಆ ಸಿಎಂ ಅಂತೆಲ್ಲ ಏನೂ ಇಲ್ಲ. ನಮ್ಮಲ್ಲಿ ಜಾತಿಯಾಧಾರಿತವಾಗಿ ಮುಖ್ಯಮಂತ್ರಿ ಆಯ್ಕೆ ಮಾಡುವುದಿಲ್ಲ. ಆ ಸಂದರ್ಬಕ್ಕೆ ಯಾರು ಸಮರ್ಥರಿರುತ್ತಾರೋ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿಯಾಗಿ ಆಯ್ಕೆಯಾಗುವವರಿಗೆ ಪಕ್ಷದ ಧ್ಯೇಯೋದ್ದೇಶಗಳನ್ನು ಮುನ್ನಡೆಸುವ ಸಾಮರ್ಥ್ಯ ಇರಬೇಕು. ಅಧಿಕಾರಕ್ಕೆ ಬರಬೇಕು, ಸಿಎಂ ಆಗಬೇಕೆಂದು ಎಲ್ಲರಿಗೂ ಆಸೆ ಇದೆ. ನಮ್ಮ ಪಕ್ಷದಲ್ಲಿ ಹತ್ತು ಜನರಿಗೆ ಮುಖ್ಯಮಂತ್ರಿಯಾಗುವ ಆಸೆ ಇದ್ದು, ಅದರಲ್ಲಿ ನಾನೂ ಒಬ್ಬ. ಆದರೆ ನಮ್ಮ ಪಕ್ಷದ ಪದ್ಧತಿಯಂತೆ ಅಧಿಕಾರಕ್ಕೆ ಬಂದ ಮೇಲೆ ಹೈಕಮಾಂಡ್ ತಿರ್ಮಾನ ಮಾಡುತ್ತದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − eleven =
Remember me
