ತುಮಕೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಕು ಎನ್ನಿಸಿದ ದಿನ ರಾಜ್ಯದಲ್ಲಿ ಡಾ.ಜಿ.ಪರಮೇಶ್ವರ್​ ಸಿಎಂ ಆಗಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಿಎಂ ಬದಲಾವಣೆ ಬಗ್ಗೆ ಮತ್ತಷ್ಟು ಕುತೂಹಲ ಹುಟ್ಟುಹಾಕಿದರು.
ನಗರದಲ್ಲಿ ಪೊಲೀಸ್ ವಸತಿ ಗೃಹ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಂತರ ಪರಮೇಶ್ವರ್​ ಸಿಎಂ ಆಗಬೇಕು. ಇದಕ್ಕಾಗಿ ನಾವೆಲ್ಲ ಅವರ ಬೆಂಬಲಕ್ಕಿರುತ್ತೇವೆ ಎಂದರು.
ಪರಮೇಶ್ವರ್ ಅವರು ಈಗ ಗೃಹ ಸಚಿವರು ಆಗಿದ್ದಾರೆ. ಮುಂದೆ ಏನು ಬೇಕಾದರೂ ಆಗಬಹುದು. ಡಾಕ್ಟರೇ ನಿಮಗೆ ಅದೃಷ್ಟಯಿದೆ ನಡೆಸುತ್ತೀರಿ ಅಂತ ಹಿಂದೊಮ್ಮೆ ಹೇಳಿದ್ದೆ. ಏಕೆಂದರೆ ಅವರಿಗೆ ಅದೃಷ್ಟ ಇದೆ ಅಂತಾ ನಾನು ಭಾವಿಸಿದ್ದೇನೆ. ನಮ್ಮ ಜಿಲ್ಲೆಯಿಂದ ಒಬ್ಬ ಮುಖ್ಯಮಂತ್ರಿ ಆಗ್ತಾರೆ ಅಂದರೆ ನಾವೆಲ್ಲ ಸಂತೋಷ ಪಡುತ್ತೇವೆ. ನಾವೆಲ್ಲ ಮುಖ್ಯಮಂತ್ರಿ ಆದ್ದಂತೆ ಭಾವಿಸುತ್ತೇನೆ ಎಂದರು.
ಸಿದ್ದರಾಮಯ್ಯ ಇರುವವರೆಗೆ ನಾವೆಲ್ಲ ಸಿದ್ದರಾಮಯ್ಯ ಪರ.‌ ನಾವು ಮತ್ತು ಪರಮೇಶ್ವರ್ ಇಬ್ಬರು ಅವರ ಪರವಿರುತ್ತೇವೆ. ಸಿದ್ದರಾಮಯ್ಯ ಹೊರತು ಪಡಿಸಿದರೆ, ಪರಮೇಶ್ವರ್ ಸಿಎಂ ಆಗಬೇಕು ಅಂತ ಬಯಸುತ್ತೇವೆ ಎಂದು ವೇದಿಕೆ ಮೇಲಿದ್ದ ಗೃಹ ಸಚಿವ ಪರಮೇಶ್ವರ್​ ಎದುರೇ ಹೇಳಿದರು.
ಎಐಸಿಸಿಯವರು ನಮಗೆ ಹೇಳಿದ್ದಾರೆ ಏನು ಮಾತನಾಡಬಾರದು ಅಂತ. ಆದರೆ, ನಾನು ಮತ್ತು ಪರಮೇಶ್ವರ್ ಒಟ್ಟಿಗೆ ಸಭೆಯಲ್ಲಿ ಕಾಣಿಸಿಕೊಂಡು ತುಂಬಾ ದಿನಗಳಾಗಿತ್ತು.‌ ಹಾಗಾಗಿ ನನ್ನ ಮನಸಿನ ಭಾವನೆಗಳನ್ನು ಹೇಳಿದ್ದೇನೆ. ನಾನು ಯಾರಿಗೂ ಹೆದರಲ್ಲ, ಎಐಸಿಸಿಗೂ ಕೂಡ. ಈಗ ಮಾತನಾಡಿದ್ದು ಆಗೊಯ್ತು, ಮುಂದೆ ಮಾತನಾಡಲ್ಲ ಅಂತ ಹೇಳ್ತೀವಿ. ನಾನಂತೂ ಮುಂದೆ ಚುನಾವಣೆಗೆ ನಿಲ್ಲೋದಿಲ್ಲ ಎಂದರು.
ಎಐಸಿಸಿ ನಾಯಕರ ಮಾತಿಗೂ ಡೋಂಟ್​ ಕೇರ್​ಇತ್ತೀಚೆಗೆ ಎಐಸಿಸಿ ನಾಯಕರು ಬೆಂಗಳೂರಿಗೆ ಬಂದು ಸಭೆ ನಡೆಸಿದ್ದರು. ನಾಯಕತ್ವ ಬದಲಾವಣೆ ಕುರಿತಂತೆ ಯಾರೂ ಬಹಿರಂಗವಾಗಿ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಿದ್ದರು. ಆದರೆ, ನಾಯಕತ್ವ ಬದಲಾವಣೆ ಕುರಿತಾದ ಹೇಳಿಕೆಗಳು ಹೊರಬರುತ್ತಲೇ ಇವೆ. ನಾನು ಕೂಡ ಸಿಎಂ ಆಕಾಂಕ್ಷಿ ಎಂದು ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ. ಮೇಲ್ನೋಟಕ್ಕೆ ಕಾಂಗ್ರೆಸ್​ನಲ್ಲಿ ಎರಡು ಬಣ ಸೃಷ್ಟಿಯಾಗಿದ್ದು, ಒಂದು ಬಣ ಡಿಕೆಶಿ ಪರ ಬ್ಯಾಟ್​ ಬೀಸಿದರೆ, ಇನ್ನೊಂದು ಬಣ ಸಿದ್ದರಾಮಯ್ಯ ಪರ ಬ್ಯಾಟ್​ ಬೀಸುತ್ತಿದೆ. ಮುಂದಿನ ಅವಧಿಗೆ ಡಿಸಿಎಂ ಡಿಕೆಶಿ ಸಿಎಂ ಆಗಬೇಕು ಎಂಬ ಮಾತುಗಳೂ ಕೇಳಿಬರುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್​ನಲ್ಲಿ ಏನೆಲ್ಲ ಬೆಳವಣಿಗೆ ನಡೆಯಬಹುದು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.
‘ನಾನು ಸಿಎಂ ಆಕಾಂಕ್ಷಿ, ಹೈಕಮಾಂಡ್ ಸೂಚಿಸಿದರೆ…’:ಪ್ರಿಯಾಂಕ್ ಖರ್ಗೆ

ಅಂತರ್ಜಾತಿ ವಿವಾಹವಾದ ಪ್ರೇಮಿಗಳಿಬ್ಬರಿಗೆ ಬೆದರಿಕೆ: ಚಿತ್ರದುರ್ಗ ಎಸ್ಪಿ ಮೊರೆ ಹೋದ ನವದಂಪತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 5 =
Remember me
