ಬೆಂಗಳೂರು:ಈಗಾಗಲೇ ಮುಖ್ಯಮಂತ್ರಿಗಳು ಕೈಗೊಂಡಿರುವ ನಿರ್ಧಾರವನ್ನು ಅಭಿನಂಧಿಸುತ್ತಾ, ಇನ್ಮುಂದೆ ಸನ್ಮಾನ ರೂಪದಲ್ಲಿ ಸಾರ್ವಜನಿಕರಿಂದ ಹಾರ, ಶಾಲು, ಹೂವಿನ ಗುಚ್ಛಗಳನ್ನು ಸ್ವೀಕರಿಸುವುದಿಲ್ಲ ಎಂದು ಸಚಿವ ಡಾ| ಜಿ.ಪರಮೇಶ್ವರ ಹೇಳಿದ್ದಾರೆ.
ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರು ನನಗೆ ಗೌರವ-ಸನ್ಮಾನದ ರೂಪದಲ್ಲಿ ಹಾಗೂ ಅಭಿಮಾನದಿಂದ ಹಾರ -ತುರಾಯಿ, ಪುಷ್ಪಗುಚ್ಛಗಳು ಮತ್ತು ಶಾಲು-ಶಲ್ಯಗಳನ್ನು ನೀಡುವುದನ್ನು ಅತ್ಯಂತ ವಿನಯ ಪೂರ್ವಕವಾಗಿ ಸ್ವೀಕರಿಸದೇ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಹಾಗೂ ಸಾರ್ವಜನಿಕ ಸಮಾರಂಭಗಳಿಗೂ ಅನ್ವಯವಾಗಲಿದೆ. ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಕೈಗೊಂಡಿರುವ ನಿರ್ಧಾರವನ್ನು ಅಭಿನಂಧಿಸುತ್ತಾ ನಾನೂ ಅವರನ್ನು ಅನುಸರಿಸಲು ಬಯಸಿದ್ದೇವೆ.ಕಾಣಿಕೆಗಳ ಮೂಲಕವೇ ಪ್ರೀತಿ ಮತ್ತು ಗೌರವಗಳನ್ನು ಸಲ್ಲಸಬೇಕೆಂದೇನಿಲ್ಲ. ನಮ್ಮೆಲ್ಲರ ಪ್ರೀತಿ ಅಮಾನ ಸದಾ ನನ್ನ ಮೇಲೆ ಅದಕ್ಕೆ ನಾನು ಋಣಿಯಾಗಿರವೆ ಎಂದು ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನ ರೂಪದಲ್ಲಿ ಸಾರ್ವಜನಿಕರಿಂದ ಹಾರ ಶಾಲು ಹೂವಿನ ಗುಚ್ಛಗಳನ್ನು ಸ್ವೀಕರಿಸುವುದಿಲ್ಲ. ಒಂದು ವೇಳೆ ಪ್ರೀತಿಯಿಂದ ಕೊಡಬೇಕು ಎಂದಿದ್ದರೆ ಪುಸ್ತಕಗಳನ್ನು ನೀಡುವಂತೆ ಟ್ವೀಟ್​​ ಮಾಡಿದ್ದರು.
ಜೂನ್ 1ರಿಂದ 200 ಯೂನಿಟ್ ಒಳಗೆ ವಿದ್ಯುತ್ ಬಿಲ್ ಬಂದರೆ ಕಟ್ಟಬೇಡಿ: ಸಂಸದ ಪ್ರತಾಪ್ ಸಿಂಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
