ಬೆಂಗಳೂರು:ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜಿ.ಎಸ್. ಉಮಾಪತಿ ಕಾರ್ಯನಿರ್ವಹಿಸಲಿದ್ದಾರೆ.
ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಆಡನೂರು ಗ್ರಾಮದ ಉಮಾಪತಿ ಅವರು, ದಾವಣಗೆರೆಯಲ್ಲಿ ಬಿ.ಇ. ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ ನಂತರ ಮಂಗಳೂರಿನ ಎನ್ಐಟಿಕೆಯಲ್ಲಿ ಎಂ.ಇ. ಇನ್ ಸ್ಟ್ರಕ್ಚರ್ಸ್ ಹಾಗೂ ಕೋಲ್ಕತಾದಲ್ಲಿ ಎಂ.ಇ. ಇನ್ ಪಬ್ಲಿಕ್ ಹೆಲ್ತ್ ವ್ಯಾಸಂಗ ಪೂರೈಸಿದ್ದಾರೆ. ಕರ್ನಾಟಕ ಸರ್ಕಾರದ ಪಿ.ಡಬ್ಲ್ಯು.ಡಿ. ಇಲಾಖೆಯಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿ‌ ಸೇವೆ ಸಲ್ಲಿಸಿ 2018ರಲ್ಲಿ ನಿವೃತ್ತರಾಗಿದ್ದಾರೆ.
ವಿದ್ಯಾರ್ಥಿ ದೆಸೆಯಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ, ನಂತರ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಬಳ್ಳಾರಿ ಜಿಲ್ಲೆಯ ಕಾರ್ಯವಾಹರಾಗಿ, ದಾವಣಗೆರೆ ಜಿಲ್ಲೆಯ ವ್ಯವಸ್ಥಾ ಪ್ರಮುಖರಾಗಿ, ದಾವಣಗೆರೆ ಜಿಲ್ಲಾ ಸಂಘಚಾಲಕರಾಗಿ, ಶಿವಮೊಗ್ಗ ವಿಭಾಗದ ವಿಭಾಗ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಪ್ರಸ್ತುತ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಗಳೂರು ಮಹಾನಗರದ ಸಂಘಚಾಲಕರಾಗಿ ಮಿಲಿಂದ್ ಗೋಖಲೆ ಹಾಗೂ ಮಂಗಳೂರು ವಿಭಾಗದ ವಿಭಾಗ ಸಂಘಚಾಲಕರಾಗಿ ಡಾ. ನಾರಾಯಣ ಶೆಣೈ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
