ಮೈಸೂರು:ರಾಜ್ಯದ ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಸಿಡಿದೆದ್ದಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ರಾಜಕಾರಣವೇ ಗೊತ್ತಿಲ್ಲ. ಅವರು ನನ್ನಷ್ಟು ಗಟ್ಟಿ ಅಲ್ಲವೇ ಅಲ್ಲ. ಅವರ ರೀತಿ ಅಧಿಕಾರಕ್ಕಾಗಿ ಯಾರ ಯಾರ ಮನೆ ಬಾಗಿಲಿಗೂ ಹೋದವನಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಚಾಮುಂಡೇಶ್ವರಿ ಜನರ ಆಶೀರ್ವಾದಿಂದ ಗೆಲ್ಲುತ್ತೇನೆ. ಪ್ರಚಾರದ ವೇಳೆ ನನಗೆ ಅದ್ಧೂರಿ ಸ್ವಾಗತ ಕೊಟ್ಟಿದ್ದರು. ಸಿದ್ದರಾಮಯ್ಯ ಇಷ್ಟು ವರ್ಷ ಇಲ್ಲಿ ರಾಜಕೀಯ ಮಾಡಿದ್ದಾರೆ. ಆದರೆ ನನ್ನ ವಿರುದ್ಧ ಯಾರನ್ನು ಕಣಕ್ಕಿಳಿಸಬೇಕು ಅನ್ನೋದು ಅವರಿಗೆ ಗೊತ್ತಿರಲಿಲ್ಲ. ತಾಲ್ಲೂಕು ಬೋರ್ಡ್, ಎಪಿಎಂಸಿ, ಡೈರಿಯಲ್ಲಿ ಅಪ್ಪ-ಮಕ್ಕಳು ಸೋತಿದ್ದಾರೆ. ಅಂತಹವರನ್ನು ಕರ್ಕೊಂಡು ಬಂದು ನನ್ನ ವಿರುದ್ಧ ನಿಲ್ಲಿಸಿದ್ದಾರೆ ಎಂದು ಗುಡುಗಿದರು.
ಇದನ್ನೂ ಓದಿ:ಪವಿತ್ರಾ ಲೋಕೇಶ್-ನರೇಶ್ ಪ್ರೇಮ್ ಕಹಾನಿ: ‘ಮತ್ತೆ ಮದುವೆ’ ಚಿತ್ರದ ಟ್ರೈಲರ್​ ಬಿಡುಗಡೆ
ಸಿದ್ದರಾಮಯ್ಯ ಬರಿ ದ್ವೇಷದ ರಾಜಕಾರಣ ಮಾಡಿದರು. ತಮಗಾಗಿ ಸರ್ವಸ್ವವನ್ನು ತ್ಯಾಗ ಮಾಡಿದ ಮರಿಗೌಡನಿಗೆ ಟಿಕೆಟ್​ ಕೊಡಬೇಕಿತ್ತು. ಒಕ್ಕಲಿಗರಲ್ಲೇ ಕೊಡುವುದಿದ್ದರೆ ಸತ್ಯಪ್ಪ ಮಗ ಅರುಣ್, ನರಸೇಗೌಡ ಮತ್ತು ಕೃಷ್ಣಸಾಗರ್ ಇದ್ದರು. ಇವರಿಗೆ ಕೊಟ್ಟಿದ್ದರೆ ಗೌರವಯುತವಾಗಿ ಸೋಲುತ್ತಿದ್ದರು. ಮಾವಿನಹಳ್ಳಿ ಸಿದ್ದೇಗೌಡ ಅವರ ಊರಲ್ಲೇ ಎಷ್ಟು ವೋಟ್​ ತಗೋತಾನೆ ನೋಡೊಣ ಬನ್ನಿ. ಈ ಸಿದ್ದೇಗೌಡನನ್ನು ನಾನು ಯಾಕೆ ಬುಕ್ ಮಾಡಲಿ. ನಾನು ಸಿದ್ದೇಗೌಡನ‌ ಜೊತೆ ಸೇರೋದು ಬಿಡಿ, ಅವನನ್ನು ನನ್ನ ಮನೆ ಬಾಗಿಲಿಗೆ ಸೇರಿಸುವುದಿಲ್ಲ ಎಂದರು.
ನಾನು ಗೆಲ್ಲಲಿ, ಸೋಲಲಿ ನನ್ನ ಜಾಯಿಮಾನದಲ್ಲಿ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಲ್ಲ. ಈ ಸಿದ್ದೇಗೌಡನ ಬಗ್ಗೆ ಸಿದ್ದರಾಮಯ್ಯಗೆ ನಾನು ಹೇಳಿದ್ದೆ. ನಾನು ಹೇಳಿದ್ದೆಲ್ಲ ಅವರು ಮರೆತು ಹೋಗಿದ್ದಾರೆ. ನನಗೆ ಹೋದ ಚುನಾವಣೆಯೇ ಕಷ್ಟ ಆಗಲಿಲ್ಲ. ಇನ್ನು ಈಗ ಕಷ್ಟ ಆಗುತ್ತಾ? ಮಾವಿನಹಳ್ಳಿ ಸಿದ್ದೇಗೌಡ ಬುಕ್ ಮಾಡೋದಲ್ಲ, ಜೀವಮಾನದಲ್ಲಿ ಮಾತನಾಡಿಸಲ್ಲ. ನನ್ನ ಬಿಟ್ಟು ಹೋದ ಐದು ಜನರನ್ನೂ ನಾನು ಹತ್ತಿರ ಸೇರಿಸಲ್ಲ. ನಾನು ಮಂಜೇಗೌಡ ಹಾಗೂ ವಾಸು ಯಾರ ಮನೆಗೂ ಹೋಗಲಿಲ್ಲ. ಸಿದ್ದರಾಮಯ್ಯಗೆ ಉಪಕಾರ ಸ್ಮರಣೆ ಇಲ್ಲ. ಅದಕ್ಕೆ ಇಷ್ಟೆಲ್ಲ ಆಗಿದೆ ಎಂದು ವಾಗ್ದಾಳಿ ನಡೆಸಿದರು.(ದಿಗ್ವಿಜಯ ನ್ಯೂಸ್​)
ಏಕನಾಥ್​ ಸಿಂಧೆ ಬಣಕ್ಕೆ ಸುಪ್ರೀಂಕೋರ್ಟ್​ನಿಂದ ಬಿಗ್​ ರಿಲೀಫ್​: ಉದ್ಧವ್​ ಠಾಕ್ರೆ ಬಣಕ್ಕೆ ನೈತಿಕ ಗೆಲುವು

ಕರ್ನಾಟಕದ ಸಾವಿತ್ರಿ ಬಾಯಿ ಫುಲೆ, ಅಕ್ಷರ ದಾಸೋಹಿ ಪುಟ್ಟಮ್ಮಜ್ಜಿ ಇನ್ನಿಲ್ಲ…

ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
