ಗದಗ:ಏಪ್ರಿಲ್​ 19ರಂದು ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಮಲಗಿದ್ದಲ್ಲೇ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಏಪ್ರಿಲ್​ 19ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಐವರು ಆರೋಪಿಗಳು ಕರತ್ಯ ಎಸಗಿ ಪರಾರಿಯಾಗಿದ್ದಾರೆ. ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,  ಐದು ತಂಡ ರಚಿಸಿ ಹಂತಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಇದನ್ನೂ ಓದಿ:ಅಬಕಾರಿ ನೀತಿ ಹಗರಣ; ಮಾಜಿ ಎಐಎಸ್​ ಅಧಿಕಾರಿಯನ್ನು ಬಂಧಿಸಿದ ED
ಕೌಟುಂಬಿಕ ಹಾಗೂ ವ್ಯವಹಾರಿಕ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳುತ್ತೇವೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ತಿಳಿಸಿದ್ದಾರೆ.
ಗದಗ ಉರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಮನೆಯಲ್ಲಿ ಏಪ್ರಿಲ್​ 19ರಂದು ಮಲಗಿದ್ದಲ್ಲೇ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಸುನಂದಾ ಅವರ ಪುತ್ರ ಕಾರ್ತಿಕ್​ ಮದುವೆ ನಿಗದಿಪಡಿಸುವ ಸಂಬಂಧ ಕೊಪ್ಪಳದಿಂದ ಸಂಬಂಧಿಕರು ಆಗಮಿಸಿದ್ದ ವೇಳೆ ದುರ್ಘಟನೆ ನಡೆದಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
