ಗದಗ:ತಲೆನೋವು ತಾಳಲಾರದೇ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಗದಗದಲ್ಲಿ ಗುರುವಾರ ನಡೆದಿದೆ.
ಗದಗ ತಾಲೂಕಿನ ಮುಳಗುಂದ ಪಟ್ಟಣದ ಬಣಕಾರ ಓಣಿ ನಿವಾಸಿ ಲಕ್ಷ್ಮಿ ಗಣಮುಖಿ (22) ಎಂಬ ಯುವತಿ ನೇಣಿಗೆ ಶರಣಾಗಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ನೇಣಿಗೆ ಕೊರಳೊಡ್ಡಿದ್ದಾಳೆ. ಹೊರ ಹೋಗಿದ್ದ ಪಾಲಕರು ಮನೆ ಬಂದ ಬಳಿಕ ಮಗಳ ಸ್ಥಿತಿ ನೋಡಿ ಆಘಾತಕ್ಕೊಳಗಾಗಿದ್ದಲ್ಲದೇ ಆಕ್ರಂದನ ಮುಗಿಲು ಮುಟ್ಟಿತ್ತು.
ಸಾಕಷ್ಟು ಬಾರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರೂ ತಲೆನೋವು ಕಡಿಮೆಯಾಗಿರಲಿಲ್ಲ. ನನ್ನ ಆರೋಗ್ಯ ಸರಿ ಹೋಗುವುದೇ ಇಲ್ಲ ಎಂದು ತನ್ನಷ್ಟಕ್ಕೆ ತಾನೇ ಅಂದುಕೊಂಡು ಜಿಗುಪ್ಸೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನಾ ಸ್ಥಳಕ್ಕೆ ಮುಳಗುಂದ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − one =
Remember me
