ಶಿವಮೊಗ್ಗ:ಗಮಕ ಕಲಾವಿದ, 2022ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಎಚ್.ಆರ್.ಕೇಶವಮೂರ್ತಿ(88) ಅವರು ಬುಧವಾರ ನಿಧನರಾದರು.
ಪತ್ನಿ, ಪುತ್ರಿಯನ್ನು ಅಗಲಿದ್ದು, ಗುರುವಾರ ಬೆಳಗ್ಗೆ ಸ್ವಗ್ರಾಮ ಹೊಸಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಕೇಶವಮೂರ್ತಿ ಅವರಿಗೆ 2022ರ ಜ.25ರಂದು ಕಲಾ ವಿಭಾಗದಲ್ಲಿ ಕೇಂದ್ರ ಸರ್ಕಾರ ನೀಡುವ ಶ್ರೇಷ್ಠ ಪುರಸ್ಕಾರ ಸಂದಿತ್ತು.
ಗಮಕ ಕ್ಷೇತ್ರದಲ್ಲಿ ಪರಿಣಿತಿ ಪಡೆದಿದ್ದ ಎಚ್.ಆರ್.ಕೇಶವಮೂರ್ತಿ ಅವರು ಹೊಸಹಳ್ಳಿಯಲ್ಲಿರುವ ಗಮಕ ಕಲಾ ಪರಿಷತ್‌ನಿಂದ (ಗಮಕ ಆರ್ಟ್ ಅಕಾಡೆಮಿ) ಲಭ್ಯವಿರುವ ಗಮಕದ ಧ್ವನಿ ಹಾಡುಗಳಲ್ಲಿ ಕಾಣಿಸಿಕೊಂಡ ಕಲಾವಿದರಲ್ಲಿ ಒಬ್ಬರಾಗಿದ್ದರು. ಗಮಕ ಕಲಾ ಸಾಧಕರಿಗೆ ನೀಡಲಾಗುವ ಕುಮಾರವ್ಯಾಸ ಪ್ರಶಸ್ತಿಯು ಮೊದಲ ಬಾರಿಗೆ ಒಲಿದಿತ್ತು. ವಾಚನದಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನೂ ಪಡೆದಿದ್ದರು. ಜತೆಗೆ ಸಾಕಷ್ಟು ರಾಜ್ಯಮಟ್ಟದ ಪ್ರಶಸ್ತಿಗಳೂ ಅವರನ್ನು ಹರಸಿಬಂದಿದ್ದವು.
ವೇದಬ್ರಹ್ಮ ರಾಮಸ್ವಾಮಿ ಶಾಸ್ತ್ರಿ ಮತ್ತು ಲಕ್ಷ್ಮೀದೇವಪ್ಪ ದಂಪತಿ ಪುತ್ರರಾಗಿ ಕೇಶವಮೂರ್ತಿ ಅವರು 1934ರ ಫೆ.22ರಂದು ಹೊಸಳ್ಳಿಯಲ್ಲಿ ಜನಿಸಿದ್ದರು. ಬಾಲ್ಯದಿಂದಲೂ ತಂದೆಯಂತೆಯೇ ಗಮಕ ಕಲೆ ಬಗ್ಗೆ ಆಸಕ್ತರಾಗಿದ್ದ ಅವರು ಗಮಕ ಕಲೆಯನ್ನು ಉಳಿಸಿ ಬೆಳೆಸಲು ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದರು.
ಇಮ್ರಾನ್ ಖಾನ್ ಆಡಿಯೋ ಲೀಕ್​: ನಿಮ್ಮಿಂದಾಗಿ ನನ್ನ ಖಾಸಗಿ ಅಂಗಗಳು ನೋಯುತ್ತಿವೆ.. ಇಂದು ಬರೋಕೆ ಆಗಲ್ಲ…

ಶ್ರಾವಣ, ಕಾರ್ತೀಕ, ಆಷಾಢ ಮಾಸ… ಅಂತ ಸ್ಕೂಲ್ ಮಕ್ಕಳಿಗೆ ಮೊಟ್ಟೆ ಕೊಡ್ತಿಲ್ಲ ಹೆಡ್ ಮೇಷ್ಟ್ರು! ಚಿನಗ ಶಾಲೆ ಶಿಕ್ಷಕರ ಆಡಿಯೋ ವೈರಲ್​

ವಿದ್ಯಾರ್ಥಿ ಹಂತಕನ ಬಂಧನ: ಶಿಕ್ಷಕಿ ಮೇಲಿನ ಅತಿರೇಕದ ಪ್ರೇಮವೇ ಕೊಲೆಗೆ ಕಾರಣ? ವಾಟ್ಸ್​ಆ್ಯಪ್​ನಲ್ಲಿದೆ ರಹಸ್ಯ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 1 =
Remember me
