ಬೆಂಗಳೂರು:ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗಣೇಶ ಚತುರ್ಥಿ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಹಾಗೂ ಉತ್ಸವ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥಪ್ರಸಾದ್ ತಿಳಿಸಿದ್ದಾರೆ.
ನಗರದಲ್ಲಿ ಸೋಂಕಿತರ ಸಂಖ್ಯೆ 50 ಸಾವಿರ ದಾಟಿದ್ದು, 12 ಸಾವಿರಕ್ಕೂ ಅಧಿಕ ರಸ್ತೆ ಮತ್ತು ಮನೆಗಳನ್ನು ಕಂಟೇನ್ಮೆಂಟ್ ಮಾಡಲಾಗಿದೆ. ಗಣೇಶ ಉತ್ಸವ ಆಚರಣೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆಯಿದೆ. ಹೀಗಾಗಿ, ರಸ್ತೆಗಳು, ದೇವಾಲಯ ಆವರಣ ಹಾಗೂ ಗಲ್ಲಿಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದಿರಲು ಚರ್ಚೆ ಮಾಡಲಾಗಿದೆ. ಈ ಬಗ್ಗೆ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
ಸಾರ್ವಜನಿಕರು ತಮ್ಮ ಮನೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಅವಕಾಶ ನೀಡಲಾಗುವುದು. ಆದರೆ, ಈ ಮೂರ್ತಿಗಳನ್ನು ವಿಸರ್ಜನೆ ಮಾಡಲು ಬಿಬಿಎಂಪಿಯಿಂದ ಮೊಬೈಲ್ ವಾಹನಗಳ
ವ್ಯವಸ್ಥೆ ಮಾಡಲಾಗುವುದು. ಮನೆಯಲ್ಲಿ ಪ್ರತಿಷ್ಠಾಪಿಸಿದ ಮೂರ್ತಿಗಳ ವಿಸರ್ಜನೆಗೆ ಹೊರಗಡೆ ಬಂದು ಗುಂಪು ಸೇರುವುದಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಮಂಜುನಾಥ ಪ್ರಸಾದ್ ತಿಳಿಸಿದರು.
ಅಂಗವಿಕಲರಿಗಾಗಿ ಬಿಪಿಒ ಸಂಸ್ಥೆಯನ್ನೇ ಆರಂಭಿಸಿರುವ ಪವಿತ್ರಾರಿಗೆ ಕ್ಯಾಡ್​ಬರಿ ಡೈರಿಮಿಲ್ಕ್ ಧನ್ಯವಾದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − fourteen =
Remember me
