ಬೆಂಗಳೂರು:ಪಶ್ಚಿಮ ಬಂಗಳಾದ ರಾಜಧಾನಿ ಕಲ್ಕತ್ತಾದ ಆರ್​ಜಿಕಾರ್​ ಮೆಡಿಕಲ್​ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆಯೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದ್ದು, ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.
ನಗರದ ಎಚ್​ಎಸ್​ಆರ್​ ಲೇಔಟ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಡುತ್ತಿದ್ದಾರೆ.
ಸಂತ್ರಸ್ತೆ ಕೋರಮಂಗಲದ ಪಬ್​ ಒಂದರಿಂದ ಪಾನಮತ್ತರಾಗಿ ಹೊರಬಂದಿದ್ದಾರೆ. ಬಳಿಕ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು ಸಂತ್ರಸ್ತೆ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಸಂತ್ರಸ್ತೆ ಪಾನಮತ್ತರಾದ ಸ್ಥಿತಿಯಲ್ಲಿರುವುದನ್ನು ಕಂಡು ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡ ಆಟೋ ಚಾಲಕ ಆಕೆಯನ್ನು ಎಚ್​ಎಸ್​ಆರ್​ ಲೇಔಟ್​ಗೆ ಕರೆದೊಯ್ದು ತನ್ನ ಸ್ನೇಹಿತರ ಜತೆಗೂಡಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + twelve =
Remember me
