| ಗೋವಿಂದರಾಜು ಚಿನ್ನಕುರ್ಚಿ ಬೆಂಗಳೂರುರೈತರ ಕಲ್ಯಾಣಕ್ಕಾಗಿ ಆರಂಭಗೊಂಡಿದ್ದ ಗಂಗಾ ಕಲ್ಯಾಣ ಯೋಜನೆಯಿಂದ ಗುತ್ತಿಗೆದಾರರ ಕಲ್ಯಾಣವಾಗಿದ್ದು ಇದೀಗ ಹಗರಣದ ತನಿಖೆ ಸಿಐಡಿ ಹೆಗಲೇರಿದೆ. ಗಂಗಾ ಕಲ್ಯಾಣ ಕೊಳವೆ ಬಾವಿ ಯೋಜನೆ ಬಹುಕೋಟಿ ಹಗರಣದ ತನಿಖೆಯನ್ನು ಅಪರಾಧ ತನಿಖಾ ವಿಭಾಗಕ್ಕೆ (ಸಿಐಡಿ) ರಾಜ್ಯ ಸರ್ಕಾರ ಕೊನೆಗೂ ಒಪ್ಪಿಸಿದೆ. ವಿಶೇಷ ತಂಡ ರಚನೆ ಆಗಿದ್ದು, ರಾಜ್ಯದ ಎಲ್ಲೆಡೆ ವ್ಯಾಪಿಸಿರುವ ಅಕ್ರಮ ವ್ಯವಹಾರದ ತನಿಖೆ ಚುರುಕುಗೊಂಡಿದೆ.
ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್​ಸೆಟ್ ಅಳವಡಿಸಿ ನೀರನ್ನು ಒದಗಿಸುವ ಯೋಜನೆಯೇ ಗಂಗಾ ಕಲ್ಯಾಣ. ವಿವಿಧ ನಿಗಮಗಳಿಂದ ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡಲಾಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಮಾಡಲಾಗಿತ್ತು. ಪ್ರತಿಫಲವಾಗಿ ಗುತ್ತಿಗೆದಾರರು ನಕಲಿ ದಾಖಲಾತಿಗಳನ್ನು ಸಲ್ಲಿಸಿ ನಿಯಮಗಳನ್ನು ಉಲ್ಲಂಘಿಸಿ ಗುತ್ತಿಗೆ ಪಡೆದಿದ್ದರು. ಇದಲ್ಲದೆ, ಯೋಜನೆಯ ಅನುದಾನ ದುರುಪಯೋಗವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸಹ ಅಕ್ರಮದಲ್ಲಿ ಶಾಮೀಲಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು.
ಪೊಲೀಸ್ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸಿದ್ದ ವಿಶೇಷ ತಂಡಕ್ಕೆ ಗಂಗಾ ಕಲ್ಯಾಣ ಕೊಳವೆ ಬಾವಿ ಹಗರಣದ ತನಿಖೆ ಜವಾಬ್ದಾರಿ ವಹಿಸಲಾಗಿದೆ. ರಾಜ್ಯ ವ್ಯಾಪಿ ಅಕ್ರಮ ನಡೆದಿದ್ದು, ಬಹುಕೋಟಿ ಹಗರಣವಾಗಿದೆ. ಇದರಲ್ಲಿ ಫಲಾನುಭವಿಗಳು, ಏಜೆಂಟ್​ಗಳು, ಗುತ್ತಿಗೆದಾರರು, ಅಧಿಕಾರಿಗಳ ಕೈವಾಡದ ಆರೋಪ ಕೇಳಿಬಂದಿದ್ದು, ಸಿಐಡಿ ಸುರ್ದೀಘ ತನಿಖೆ ಕೈಗೊಂಡಿದೆ.
ಕೋಲಾರ, ರಾಯಚೂರು, ಬಳ್ಳಾರಿ, ಹಾಸನ, ಮಡಿಕೇರಿ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಸಮಗ್ರ ತನಿಖೆಗೆ ಸಿಐಡಿಗೆ ವಹಿಸುವುದಾಗಿ ಭರವಸೆ ನೀಡಿತ್ತು. ಅಧಿಕೃತವಾಗಿ ಹಸ್ತಾಂತರ ಮಾಡಿರಲಿಲ್ಲ. ಸರ್ಕಾರ ಬದಲಾಗುತ್ತಿದಂತೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ, ವಿಧಾನಸೌಧ ಠಾಣೆಗೆ ಗಂಗಾ ಕಲ್ಯಾಣ ಯೋಜನೆ ಅಕ್ರಮ ವ್ಯವಹಾರ ಕುರಿತು ದೂರು ಸಲ್ಲಿಸಿದ್ದರು. 2019-20ನೇ ಮತ್ತು 2020-21ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ 14,577 ಕೊಳವೆ ಬಾವಿ ಕೊರೆಸಲು 431 ಕೋಟಿ ರೂ. ಟೆಂಡರ್ ಕರೆಯಲಾಗಿತ್ತು. ಟೆಂಡರ್ ಹಂಚಿಕೆ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದ್ದು, ಯೋಜನೆಗೆ ಮೀಸಲಿಟ್ಟ ಹಣದಲ್ಲಿ ಅಕ್ರಮಗಳು ನಡೆದಿದೆ. ಇದರಲ್ಲಿ ಹಿಂದಿನ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದರು.
ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ರಾಜ್ಯ ಸರ್ಕಾರ, ಶನಿವಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದೆ. ವಿಧಾನಸೌಧ ಠಾಣೆಯಲ್ಲಿ ಇರುವ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದು ತನಿಖೆಗೆ ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ.
ಗಂಗಾ ಕಲ್ಯಾಣ ಕೊಳವೆ ಬಾವಿ ಯೋಜನೆ ಹಗರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ರಾಜ್ಯ ವ್ಯಾಪಿ ಹರಡಿರುವ ಹಿನ್ನೆಲೆಯಲ್ಲಿ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ.
| ಡಾ.ಎಂ.ಎ.ಸಲೀಂ ಡಿಜಿಪಿ, ಸಿಐಡಿ

ಚಂದ್ರಯಾನ-3 ಮಹಾಕ್ವಿಜ್​: ಇಲ್ಲಿದೆ ಒಂದು ಲಕ್ಷ ರೂ. ಗೆಲ್ಲುವ ಅವಕಾಶ!
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:19 + 6 =
Remember me
