ಕೊಪ್ಪಳ:ನವಜಾತ ಹೆಣ್ಣು ಮಗುವನ್ನು ತಾಯಿಯೊಬ್ಬಳು ಯಾರೂ ಇಲ್ಲದ ಜಾಗದಲ್ಲಿ ಎಸೆದು ಹೋಗಿರುವ ಮನಕಲಕುವ ಘಟನೆ ಗಂಗಾವತಿ ತಾಲೂಕಿನ ಪ್ರಗತಿ ನಗರ ಬಳಿ ನಡೆದಿದೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರು ಮಗುವನ್ನು ರಕ್ಷಿಸಿದ್ದಾರೆ.
ಮುಳ್ಳಿನ ಪೊದೆಯಲ್ಲಿ ಅಳುವಿನ ಶಬ್ದ ಕೇಳಿ ಪರಿಶೀಲಿಸಿದಾಗ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಬಳಿಕ ಮಹಿಳೆಯರು ಮಗುವನ್ನು ರಕ್ಷಿಸಿದ್ದಾರೆ. ಮಗುವಿನ ಮೈಮೇಲೆ ತರಚಿದ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ:1.6 ಕೋಟಿ ರೂ. ತೆರಿಗೆ ಪಾವತಿಸುವಂತೆ 23 ಬಾರಿ ನೋಟಿಸ್‌; ಕಂಗಾಲಾದ ರೈತ!
ಸದ್ಯ ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ಮಗುವಿನ ಆರೈಕೆ ಮಾಡಲಾಗುತ್ತಿದೆ. ಚಿಕಿತ್ಸೆಯ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಆಸ್ಪತ್ರೆ ಸಿಬ್ಬಂದಿ ಮಗುವನ್ನು ಹಸ್ತಾಂತರ ಮಾಡಲಿದ್ದಾರೆ. ಈ ಬಗ್ಗೆ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 12 =
Remember me
