ಹಾಸನ:ಗಾರ್ಮೆಂಟ್ ಫ್ಯಾಕ್ಟರಿಯ ಯಂತ್ರವೊಂದಕ್ಕೆ ಸಿಲುಕಿ ಯುವತಿಯೊಬ್ಬಳು ಸಾವಿಗೀಡಾಗಿದ್ದು, ಆಕೆಯ ಕುಟುಂಬ ಮಾತ್ರವಲ್ಲದೆ ಸಹೋದ್ಯೋಗಿಗಳೆಲ್ಲರೂ ದುಃಖಿತರಾಗಿದ್ದಾರೆ. ಹಾಸನದ ಗಾರ್ಮೆಂಟ್ ಫ್ಯಾಕ್ಟರಿಯೊಂದರಲ್ಲಿ ಈ ದುರಂತ ಸಂಭವಿಸಿದೆ.
ಹಾಸನದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಶಾಹಿ ಗಾರ್ಮೆಂಟ್​ನಲ್ಲಿ ಕೆಲಸ ಮಾಡುತ್ತಿದ್ದ ಕಾವ್ಯಾ ಮೃತಪಟ್ಟವರು. ಹೊಳೆನರಸೀಪುರ ಮೂಲದ ದೊಡ್ಡಬ್ಯಾಗತವಳ್ಳಿ ಗ್ರಾಮದ ಕಾವ್ಯ ಎಂದಿನಂತೆ ಶುಕ್ರವಾರವೂ ಕೆಲಸಕ್ಕೆ ಬಂದಿದ್ದು, ಸಣ್ಣದೊಂದು ಆಕಸ್ಮಿಕ ಆಕೆ ಜೀವವನ್ನೇ ಕಳೆದುಕೊಳ್ಳುವಂತೆ ಮಾಡಿದೆ.
ಗಾರ್ಮೆಂಟ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಅಲ್ಲಿನ ಪ್ರಿಂಟಿಂಗ್ ಮಷಿನ್​ನೊಂದಕ್ಕೆ ಕಾವ್ಯಾಳ ಕೈ ಸಿಲುಕಿಕೊಂಡಿತ್ತು. ಅದು ದೇಹವನ್ನೂ ಎಳೆದುಕೊಂಡಿತ್ತು. ತಕ್ಷಣ ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಕಾವ್ಯಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 6 =
Remember me
