ಬೆಂಗಳೂರು:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲ ಪಕ್ಷಗಳವರೂ ಸಾಧ್ಯವಿರುವ ಎಲ್ಲ ತಂತ್ರಗಳನ್ನು ಮಾಡುತ್ತಿದ್ದು, ಕೆಪಿಪಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆ ನಿಟ್ಟಿನಲ್ಲಿ ಗ್ಯಾಸ್ ಸಿಲಿಂಡರ್ ಮೊರೆ ಹೋಗಿದ್ದಾರೆ.
ಚುನಾವಣೆಗೆ ಇನ್ನೇನು ಗಂಟೆಗಳನ್ನು ಲೆಕ್ಕಹಾಕುತ್ತಿರುವ ಈ ಸಂದರ್ಭದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಗೆಲುವಿಗಾಗಿ ಗ್ಯಾಸ್ ಸಿಲಿಂಡರ್​​ ಪೂಜೆ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಗ್ಯಾಸ್ ಸಿಲಿಂಡರ್​ಗೆ ಪೂಜೆ ಮಾಡಿದರು. ಈ ಮೂಲಕ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಂತ್ರವನ್ನೇ ಅನುಸರಿಸಿದ್ದಾರೆ.
ಇದನ್ನೂ ಓದಿ:ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..
2014ರ ಚುನಾವಣೆ ಸಮಯದಲ್ಲಿ ಗ್ಯಾಸ್ ಸಿಲಿಂಡರ್​ಗೆ ಕೈ ಮುಗಿದಿದ್ದ ನರೇಂದ್ರ ಮೋದಿ, ಗ್ಯಾಸ್ ಬೆಲೆ ಏರಿಕೆಯನ್ನು ನೆನಪಿಸಿ ಮತವನ್ನು ಯಾಚಿಸಿದ್ದರು. ಇದೇ ತಂತ್ರಗಾರಿಕೆಯನ್ನು ಬಳಸಿಕೊಂಡು ತಿರುಗೇಟು ನೀಡಿರುವ ಡಿ.ಕೆ.ಶಿವಕುಮಾರ್​, ಗ್ಯಾಸ್ ಸಿಲಿಂಡರ್​ಗೆ ಹೂ ಹಾರ ಹಾಕಿ ಪೂಜೆ ಮಾಡಿದ್ದಾರೆ. ಗ್ಯಾಸ್ ಸಿಲಿಂಡರ್​​ಗೆ ಗಂಧದಕಡ್ಡಿ ಬೆಳಗಿ, ಮಂಗಳಾರತಿ ಮಾಡಿದ ಶಿವಕುಮಾರ್, ಕಾಂಗ್ರೆಸ್ ಕಚೇರಿಯ ಸಿಬ್ಬಂದಿಗೆ ತೀರ್ಥ ನೀಡಿದರು.
ಸುಮ್ಮನಿರುವ ಇವರಿಗಿದೆ ಚುನಾವಣಾ ಫಲಿತಾಂಶವನ್ನೇ ಬದಲಿಸುವ ಶಕ್ತಿ!; ಇವರ್ಯಾರು?

ನಾನು ಬದುಕಿದ್ದಾಗಲೇ ಸಾಯೋದಕ್ಕೆ ಇಷ್ಟಪಡ್ತೀನಿ!: ನಿರ್ದೇಶಕ ಉಪೇಂದ್ರ ಹೀಗಂದಿದ್ಯಾಕೆ?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:16 + 10 =
Remember me
