ಉತ್ತರ ಪ್ರದೇಶ:ಕಾನ್ಪುರದಲ್ಲಿ ಸಲಿಂಗಕಾಮಿ ಡೇಟಿಂಗ್ ಆ್ಯಪ್ ಮೂಲಕ ನಡೆಸಲಾಗುತ್ತಿದ್ದ ‘ಸೆಕ್ಟಾರ್ಶನ್’ ದಂಧೆಯನ್ನು ಕಾನ್ಪುರ ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ.
ಸಲಿಂಗಕಾಮಿ ಡೇಟಿಂಗ್ ಆ್ಯಪ್ ‘ಬ್ಲೂಡ್’ನಲ್ಲಿ ಆರೋಪಿಗಳು ನಕಲಿ ಪ್ರೊಫೈಲ್‌ಗಳನ್ನು ರಚಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ಪಶ್ಚಿಮ) ಲಖನ್ ಸಿಂಗ್ ಯಾದವ್ ಹೇಳಿದ್ದಾರೆ.
“ಆರೋಪಿಗಳು ಸಂತ್ರಸ್ತರೊಂದಿಗೆ ಫ್ರೆಂಡ್ಲಿಯಾಗಿ ಚಾಟ್‌ಗಳಲ್ಲಿ ತೊಡಗುತ್ತಿದ್ದರು. ಸ್ವಲ್ಪ ಸಮಯದ ನಂತರ ಅವರನ್ನು ಡೇಟಿಂಗ್‌ಗೆ ಕರೆದುಕೊಂಡು ಹೋಗುತ್ತಿದ್ದರು. ಅವರು ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡ ನಂತರ ಬೆತ್ತಲೆ ವಿಡಿಯೋಗಳನ್ನು ಚಿತ್ರೀಕರಿಸುತ್ತಿದ್ದರು” ಎಂದು ಹೇಳಿದ್ದಾರೆ.
ಇಷ್ಟಕ್ಕೆ ಅವರ ಕೃತ್ಯ ಮುಗಿಯುತ್ತಿರಲಿಲ್ಲ. ಬೆಲೆಬಾಳುವ ವಸ್ತುಗಳನ್ನು ದೋಚಿ, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು. ಫೋನ್ ಬಳಸಿ ಯುಪಿಐ ಮೂಲಕ ಅವರ ಬ್ಯಾಂಕ್ ಖಾತೆಗಳಿಂದ ಹಣವನ್ನು ವರ್ಗಾಯಿಸುತ್ತಿದ್ದರು ಎಂದು ವರದಿಯಾಗಿದೆ.ಸಂತ್ರಸ್ತರಲ್ಲಿ ಒಬ್ಬರನ್ನು ಪೊಲೀಸರು ಸಂಪರ್ಕಿಸಿದಾಗ ಕೆಲವರು ನಗ್ನ ವೀಡಿಯೊವನ್ನು ರೆಕಾರ್ಡ್ ಮಾಡಿ, ಅದನ್ನು ಬ್ಲ್ಯಾಕ್‌ಮೇಲಿಂಗ್‌ಗೆ ಬಳಸುತ್ತಿದ್ದಾರೆ ಎಂದು ಆರೋಪಿಸಿದರು ಎಡಿಸಿಪಿ ಹೇಳಿದರು.
ಕಲ್ಯಾಣಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸ್ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಇದು ‘ಸೆಕ್ಸ್ಟ್ರಾಶನ್’ ಗ್ಯಾಂಗ್ ಅನ್ನು ಭೇದಿಸಲು ಸಹಾಯ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ದಿಲೀಪ್ ಪ್ರದ್ಯುಮ್ನ್ ಸಿಂಗ್ (21), ಅರುಣ್ ರಾಜ್ಪೂತ್ (22), ವಿಪಿನ್ ಸಿಂಗ್ ( 21), ಪವನ್ ಕುಮಾರ್ ಸಿಂಗ್(22), ಪ್ರವೀಣ್ ಸಿಂಗ್ (20) ಮತ್ತು ಬ್ರಿಜೇಂದ್ರ ಸಿಂಗ್ (19) ಎಂದು ಗುರುತಿಸಲಾಗಿದೆ.
ಬಂಧನದ ವೇಳೆ ಪೊಲೀಸರು ಐದು ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್, ಒಂಬತ್ತು ಎಟಿಎಂ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಟೊಮ್ಯಾಟೊ ಕಳ್ಳತನ: ಬೇಸತ್ತ ರೈತ ಕಂಡುಕೊಂಡ ಹೊಸ ಉಪಾಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − seven =
Remember me
