ಬೆಂಗಳೂರು:ಮುಂದಿನ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಗೀತಾ ಶಿವರಾಜ್​​ಕುಮಾರ್ ಆಸಕ್ತಿ ಹೊಂದಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್​ನ ಪ್ರಭಾವಿ ನಾಯಕರೊಂದಿಗೆ ಸಾಕಷ್ಟು ಮಾತಕತೆ ನಡೆಸಿದ್ದಾರೆ ಎಂಬ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ.
ನಟ ಶಿವರಾಜ್​ ಕುಮಾರ್ ಹಾಗೂ ಗೀತಾ ಶಿವರಾಜ್​ ಕುಮಾರ್ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ನಿವಾಸದಲ್ಲಿ ಭೇಟಿಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಗೀತಾ ಶಿವರಾಜ್​ ಕುಮಾರ್ ಮಾತನಾಡುತ್ತಾ, ಶಿವಮೊಗ್ಗ ಲೋಕಾಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.


ಖ್ಯಾತ ನಟ, ಹ್ಯಾಟ್ರಿಕ್ ಹೀರೊ ಶ್ರೀ@NimmaShivannaಹಾಗೂ ಅವರ ಪತ್ನಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅವರು ನನ್ನ ನಿವಾಸಕ್ಕೆ ಆಗಮಿಸಿ ಭೇಟಿಯಾಗಿ ಶುಭ ಹಾರೈಸಿದರು. ಈ ವೇಳೆ ಸಚಿವ ಶ್ರೀ ಮಧು ಬಂಗಾರಪ್ಪ ಅವರು ಉಪಸ್ಥಿತರಿದ್ದರು.pic.twitter.com/aQGuy4sfB6
‘ಶಿವಮೊಗ್ಗ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯಾವುದೇ ಸಿದ್ಧತೆ ಮಾಡಿಕೊಂಡಿಲ್ಲ. ಪಕ್ಷ, ಅವರು (ಪತಿ ಶಿವರಾಜ್​ ಕುಮಾರ್), ಸಹೋದರ ಮಧು ಬಂಗಾರಪ್ಪ ನಿರ್ಧರಿಸಿದಂತೆ ಮುಂದುವರೆಯುತ್ತೇನೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರನ್ನು ಸೌಹಾರ್ಧಯುತವಾಗಿ ಭೇಟಿ ಮಾಡಿದ್ದೇವೆ. ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಸ್ಪರ್ಧಿಸಿಲ್ಲ’ ಎಂದು ಸ್ಪಷ್ಟಪಡಿಸಿದರು.
2013ರ ವಿಧಾಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಜೆಡಿಎಸ್​ನಿಂದ ಸ್ಪರ್ಧಿಸಿದ್ದರು. ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಮುಂದಿನ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್​ ಕುಮಾರ್ ಎಂದೇ ಎಲ್ಲೆಡೆ ಚರ್ಚೆಯಾಗುತ್ತಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven + 12 =
Remember me
