ಬೆಂಗಳೂರು:ನಮ್ಮ ತಂದೆ ಬಂಗಾರಪ್ಪ ಅವರು ಇದ್ದ ಪಕ್ಷವನ್ನು ನಾನು ಸೇರಿದ್ದೇನೆ. ಪಕ್ಷಕ್ಕೆ ನಾನು ಬದ್ಧಳಾಗಿರುತ್ತೇನೆ ಎಂದು ನಟ ಶಿವರಾಜ್​ಕುಮಾರ್​ ಅವರ ಧರ್ಮಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಹೇಳಿದರು.
ಕಾಂಗ್ರೆಸ್​ ಪಕ್ಷ ಸೇರ್ಪಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೀತಾ ಶಿವರಾಜ್​ಕುಮಾರ್, ಐತಿಹಾಸಿಕ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ನನ್ನ ತಮ್ಮ ಮಧು ಬಂಗಾರಪ್ಪ ಕಾಂಗ್ರೆಸ್ ಸೇರಿದ್ದಾಗಿನಿಂದ ನಾನು ಕಾಂಗ್ರೆಸ್ ಸೇರಿದ್ದೆ. ಇದೀಗ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದೇನೆ ಎಂದರು.
ಇದನ್ನೂ ಓದಿ:ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್​ಗೆ ಸೇರ್ಪಡೆ
ನಮ್ಮ ತಮ್ಮನ ಪರವಾಗಿ ಪ್ರಚಾರ ಮಾಡಿದ್ದೇನೆ. ಶಿವರಾಜ್​ಕುಮಾರ್ ಕೂಡ ಕೆಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಾರೆ. ಶೂಟಿಂಗ್​ನಲ್ಲಿ ಬ್ಯೂಸಿ ಇರುವ ಕಾರಣ ಸದ್ಯಕ್ಕೆ ಪ್ರಚಾರದಲ್ಲಿ ಭಾಗಿಯಾಗಿಲ್ಲ. ನಾನು ಪ್ರಚಾರದಲ್ಲಿ ತೊಡಗಿಕೊಂಡಿದ್ದೇನೆ. ಪಕ್ಷ ಹೇಳಿದ ಕಡೆ ನಾನು ಪ್ರಚಾರ ಮಾಡುತ್ತೇನೆ. ಕುಮಾರ ಬಂಗಾರಪ್ಪ ಬಗ್ಗೆ ನಾನು ಮಾತನಾಡಲ್ಲ ಎಂದರು.
ಗೀತಾ ಶಿವರಾಜ್​ಕುಮಾರ್​ ಅವರು 2014 ರಲ್ಲಿ ಜೆಡಿಎಸ್​ ಪಕ್ಷದಿಂದ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಫರ್ಧೆ ಮಾಡಿದ್ದರು. ಬಿಎಸ್​ವೈ ವಿರುದ್ಧ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು. ಆಗ ಸಹೋದರ ಮಧು ಬಂಗಾರಪ್ಪ ಅವರು ಜೆಡಿಎಸ್​ ಪಕ್ಷದಲ್ಲಿದ್ದರು. ಇದೀಗ ಇಬ್ಬರು ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ.(ದಿಗ್ವಿಜಯ ನ್ಯೂಸ್​)
ಖರ್ಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ಗೆ ನಾಯಕರಾಗಬೇಕು..ಖಳನಾಯಕನಾಗಬಾರದು:ಕೆ.ಎಸ್.ಈಶ್ವರಪ್ಪ

ತಾಳಿಕೋಟೆಯಲ್ಲಿ ಅಬ್ಬರಿಸಿದ ರಾಜಾಹುಲಿ; ಭಾವೈಕ್ಯತೆ ಸಂದೇಶ ಸಾರಿದ ಬಿಎಸ್​ವೈ

ನನ್ನನ್ನು ಸೋಲಿಸಬೇಕೆಂದೇ ಬಿಜೆಪಿ-ಕಾಂಗ್ರೆಸ್​ ಒಂದಾಗಿದೆ: ನಿಖಿಲ್​ ಕುಮಾರಸ್ವಾಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − thirteen =
Remember me
