ಬೆಂಗಳೂರು:ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಲ್ಲಿ ರಾಜ್ಯದಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದೆ. ಪ್ರತಿನಿತ್ಯ ಸಾಕಷ್ಟು ನಾಯಕರು ಪಕ್ಷದಿಂದ ಪಕ್ಷಕ್ಕೆ ಜಿಗಿಯುತ್ತಿರುವುದು ಸಾಮಾನ್ಯವಾಗಿದ್ದು, ಇದೀಗ ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್​ ಅವರ ಧರ್ಮಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಕಾಂಗ್ರೆಸ್​ ಸೇರ್ಪಡೆಗೆ ಮುಂದಾಗಿದ್ದಾರೆ.
ಜೆಡಿಎಸ್​ ಪಕ್ಷವನ್ನು ತೊರೆದು ನಾಳೆ ಅಧಿಕೃತವಾಗಿ ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಲಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ನಾಳೆ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.ಇದನ್ನೂ ಓದಿ:ಮತದಾನಕ್ಕೆ ಕರೆಯೋಲೆ ನೀಡಿದ ಗ್ರಾಪಂ : ಮತದಾನ ಪ್ರಮಾಣ ಹೆಚ್ಚಳಕ್ಕೆ ವಿನೂತನ ಪ್ರಯತ್ನ
ಗೀತಾ ಶಿವರಾಜ್​ಕುಮಾರ್​ ಅವರು 2014 ರಲ್ಲಿ ಜೆಡಿಎಸ್​ ಪಕ್ಷದಿಂದ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಫರ್ಧೆ ಮಾಡಿದ್ದರು. ಬಿಎಸ್​ವೈ ವಿರುದ್ಧ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು. ಆಗ ಸಹೋದರ ಮಧು ಬಂಗಾರಪ್ಪ ಅವರು ಜೆಡಿಎಸ್​ ಪಕ್ಷದಲ್ಲಿದ್ದರು.
ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಮಧು ಬಂಗಾರಪ್ಪ ಅವರು ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇದೀಗ ಸಹೋದರ ನಡೆಯನ್ನೇ ಹಿಂಬಾಲಿಸಿರುವ ಗೀತಾ ಶಿವರಾಜ್​ಕುಮಾರ್​ ಕಾಂಗ್ರೆಸ್​ ಸೇರುತ್ತಿದ್ದಾರೆ.ಇದನ್ನೂ ಓದಿ:ನನ್ನನ್ನು ಸೋಲಿಸಬೇಕೆಂದೇ ಬಿಜೆಪಿ-ಕಾಂಗ್ರೆಸ್​ ಒಂದಾಗಿದೆ: ನಿಖಿಲ್​ ಕುಮಾರಸ್ವಾಮಿ
ಮಧು ಬಂಗಾರಪ್ಪ ಅವರು ಸೊರಬ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಸಹೋದರನ ಗೀತಾ ಶಿವರಾಜ್​ಕುಮಾರ್​ ಅವರು ಪ್ರಚಾರ ಸಹ ಮಾಡುತ್ತಿದ್ದಾರೆ. ಹೀಗಾಗಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.(ದಿಗ್ವಿಜಯ ನ್ಯೂಸ್​)
ಮಲ್ಲಿಕಾರ್ಜುನ ಖರ್ಗೆ‌ ಕೂಡಲೇ ಮೋದಿಯವರ ಬಳಿ ಕ್ಷಮೆ‌ ಕೇಳಬೇಕು:ಶೋಭಾ ಕರಂದ್ಲಾಜೆ

ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಬಿಜೆಪಿಯೋ? ಸಿದ್ದು ಕಿಡಿ

https://www.vijayavani.net/submission-of-duplicate-form-a-form-and-b-form-aiadmk-candidate-file-an-fir-in-bangalore
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 6 =
Remember me
