ಬೆಂಗಳೂರು:ದೊಡ್ಮನೆ ಸೊಸೆ, ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗೀತಾ, ಪ್ರತಿ ಸ್ಪರ್ಧಿ ಬಿ.ವೈ ರಾಘವೇಂದ್ರ ಎದುರು ಸೋಲು ಒಪ್ಪಿಕೊಂಡಿದ್ದಾರೆ. ಈ ಬಾರಿ ಗೀತಾ ಗೆಲುವಿಗಾಗಿ ಸ್ಯಾಂಡಲ್ ವುಡ್ ನ ಅನೇಕ ನಟ ನಟಿಯರು ಪ್ರಚಾರ ಮಾಡಿದ್ದರು. ಆದರೆ, ಯಾವ ಪ್ರಚಾರವೂ ಅವರನ್ನು ಕೈ ಹಿಡಿಯಲಿಲ್ಲ.
ಇದನ್ನೂ ಓದಿ:ಸುಳ್ಳಾಯ್ತು ಭವಿಷ್ಯ, ಕ್ಷಮೆ ಕೇಳಿ ಇನ್ನೆಂದೂ ಭವಿಷ್ಯ ನುಡಿಯಲಾರೆ ಎಂದ ಖ್ಯಾತ ಜ್ಯೋತಿಷಿ ವೇಣುಸ್ವಾಮಿ!
ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್​ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಅವರ ಗೆಲುವಾಗಿದೆ. ಗೀತಾ ಶಿವರಾಜ್​ ಕುಮಾರ್ ಅವರ ಪರವಾಗಿ ನಟ ಶಿವರಾಜ್​ಕುಮಾರ್​ ಅವರು ನಿರಂತರವಾಗಿ ಪ್ರಚಾರ ಮಾಡಿದ್ದರು. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್‌ ಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
‘ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ, ನಿಮ್ಮೊಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗು ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು’ ಎಂದು ಹೇಳಿದ್ದಾರೆ.
ಬಿ. ವೈ. ರಾಘವೇಂದ್ರ 7,78,721 ಮತಗಳನ್ನು ಪಡೆದಿದ್ದು, ಗೆಲುವಿನ ಅಂತರ 2,43,715 ಮತಗಳು. ಕಾಂಗ್ರೆಸ್‌ನ ಗೀತಾ ಶಿವರಾಜಕುಮಾರ್ 5,35,006 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ 30,050 ಮತಗಳನ್ನುಗಳಿಸಿ 3ನೇ ಸ್ಥಾನವನ್ನು ಪಡೆದಿದ್ದಾರೆ.
ಜನರ ಆಶೋತ್ತರಗಳನ್ನು ಈಡೇರಿಸುವ ದಿಸೆಯಲ್ಲಿ ಆಡಳಿತ; ದೇಶದ ಜನತೆಗೆ ಮೋದಿ ಸಂದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
