ಬೆಂಗಳೂರು:ಇಂದು (ಮಾರ್ಚ್​ 16) ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು, ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಲ್ಲಿ ಇರಲಿದೆ.
ಮೊದಲ ಹಂತ ಏಪ್ರಿಲ್ 26 ಮತ್ತು ಎರಡನೇ ಹಂತದ ಮತದಾನ ಮೇ 7ಕ್ಕೆ ನಡೆಯಲಿದೆ. ಜೂನ್​ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಮಧ್ಯಾಹ್ನ 3 ಗಂಟೆಗೆ ರಾಷ್ಟ್ರ ರಾಜಧಾನಿ ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್​ ಕುಮಾರ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕವನ್ನು ಪ್ರಕಟಿಸಲಾಯಿತು.


ಕರ್ನಾಟಕದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕಾಂಗ್ರೆಸ್​ನಿಂದ 7 ಅಭ್ಯರ್ಥಿಗಳಿಗೆ ಟಿಕೆಟ್​ ಘೋಷಣೆ ಮಾಡಿದ್ದರೆ, 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ. ಈ ಬಾರಿ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಮಾಡಿಕೊಂಡಿವೆ. ಜೆಡಿಎಸ್​ಗೆ ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳನ್ನು ಬಿಜೆಪಿ ಬಿಟ್ಟು ಕೊಟ್ಟಿದೆ ಎಂಬ ಮಾಹಿತಿ ಇದೆ.
ಕರ್ನಾಟಕದ 20 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟ* ಚಿಕ್ಕೋಡಿ: ಅಣ್ಣಾ ಸಾಹೇಬ್​ ಶಂಕರ್​ ಜೊಲ್ಲೆ* ಬಾಗಲಕೋಟೆ: ಪಿ.ಸಿ. ಗದ್ದಿಗೌಡರ್* ಬಿಜಾಪುರ (ಎಸ್​ಸಿ): ರಮೇಶ್​ ಜಿಗಜಿಣಗಿ* ಕಲಬುರಗಿ (ಎಸ್​ಸಿ): ಡಾ. ಉಮೇಶ್​ ಜಾಧವ್​* ಬೀದರ್​: ಭಗವಂತ್ ಖೂಬಾ* ಕೊಪ್ಪಳ: ಡಾ. ಬಸವರಾಜ್​ ಕ್ಯಾವತೋರ್* ಬಳ್ಳಾರಿ: ಬಿ. ಶ್ರೀರಾಮುಲು* ಹಾವೇರಿ: ಬಸವರಾಜ ಬೊಮ್ಮಾಯಿ* ಧಾರವಾಡ: ಪ್ರಲ್ಹಾದ್​ ಜೋಶಿ* ದಾವಣಗೆರೆ: ಗಾಯತ್ರಿ ಸಿದ್ದೇಶ್ವರ* ಶಿವಮೊಗ್ಗ: ಬಿ.ವೈ. ರಾಘವೇಂದ್ರ* ಉಡುಪಿ-ಚಿಕ್ಕಮಗಳೂರು: ಕೋಟಾ ಶ್ರೀನಿವಾಸ ಪೂಜಾರಿ* ದಕ್ಷಿಣ ಕನ್ನಡ: ಕ್ಯಾಪ್ಟನ್​ ಬ್ರಿಜೇಶ್​ ಚೌಟಾ* ತುಮಕೂರು: ವಿ. ಸೋಮಣ್ಣ* ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್​* ಚಾಮರಾಜನಗರ: ಬಿ. ಬಾಲರಾಜ್* ಬೆಂಗಳೂರು ಗ್ರಾಮಾಂತರ: ಡಾ.ಸಿ.ಎನ್. ಮಂಜುನಾಥ್* ಬೆಂಗಳೂರು ಕೇಂದ್ರ: ಪಿ.ಸಿ. ಮೋಹನ್* ಬೆಂಗಳೂರು ಉತ್ತರ: ಕುಮಾರಿ ಶೋಭಾ ಕರಂದ್ಲಾಜೆ* ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ
ಕಾಂಗ್ರೆಸ್​ ತನ್ನ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಹಾ ಶಿವರಾತ್ರಿ ಶುಭದಿನದಂದು ಬಿಡುಗಡೆ ಮಾಡಿತು. ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್​ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ​ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಈ ಮೂಲಕ ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡಗಡೆ ಮಾಡಿದೆ.
ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟ:* ವಿಜಯಪುರ: ಎಚ್​.ಆರ್.ಅಲಗೂರು* ಶಿವಮೊಗ್ಗ: ಗೀತಾ ಶಿವರಾಜ್​ಕುಮಾರ್​* ಹಾಸನ: ಶ್ರೇಯಸ್​ ಪಾಟೀಲ್* ತುಮಕೂರು: ಎಸ್​ಪಿ ಮುದ್ದಹನುಮೇಗೌಡ* ಬೆಂಗಳೂರು ಗ್ರಾಮಾಂತರ: ಡಿಕೆ ಸುರೇಶ್* ಹಾವೇರಿ: ಆನಂದ್​ಸ್ವಾಮಿ ಗಡ್ಡ ದೇವರಮಠ* ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
ಬಿಜೆಪಿಗೆ ಬಂಡಾಯದ ಬಿಸಿಟಿಕೆಟ್​ ಘೋಷಣೆ ಬೆನ್ನಲ್ಲೇ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ತಮ್ಮ ಪುತ್ರಿನಿಗೆ ಟಿಕೆಟ್​ ಮಿಸ್​ ಆಗಿದ್ದಕ್ಕೆ ಆಕ್ರೋಶಗೊಂಡಿರುವ ಈಶ್ವರಪ್ಪ, ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸುವುದಾಗಿ ಘೋಷಣೆ ಮಾಡಿದ್ದಾರೆ. ಅದರಲ್ಲೂ ಶಿವಮೊಗ್ಗದಿಂದ ಹಾಲಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ವಿರುದ್ಧವೇ ಅಖಾಡಕ್ಕೆ ಇಳಿಯುವುದಾಗಿ ಹೇಳಿದ್ದಾರೆ. ಹೀಗಾಗಿ ಈ ಬಾರಿಯ ಚುನಾವಣಾ ಅಖಾಡ ಬಹಳ ರಂಗೇರಿದೆ. ​
ಕಳೆದ ಬಾರಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಮೈತ್ರಿ ಮಾಡಿಕೊಂಡಿತ್ತು. ಆದರೆ, ರಾಜ್ಯದ ಜನರು ಮೈತ್ರಿಯ ಕೈಹಿಡಿಯಲಿಲ್ಲ. ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್​ ಹಾಗೂ ಜೆಡಿಎಸ್ ತಲಾ​ 1 ಸ್ಥಾನಗಳೊಂದಿಗೆ ತೀವ್ರ ಹಿನ್ನಡೆಯನ್ನು ಅನುಭವಿಸಿತು. ಸಂಸದೆ ಸುಮಲತಾ ಅಂಬರೀಷ್​ ಪಕ್ಷೇತರರಾಗಿ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಜಯಭೇರಿ ಬಾರಿಸಿದರು.
ಲೋಕಸಮರಕ್ಕೆ ಮುಹೂರ್ತ ಫಿಕ್ಸ್: 7 ಹಂತದಲ್ಲಿ ಮತದಾನ, ಏಪ್ರಿಲ್​ 19 ರಂದು ಆರಂಭ, ಜೂನ್​ 4ಕ್ಕೆ ಫಲಿತಾಂಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + sixteen =
Remember me
