ಬೆಂಗಳೂರು:ರಾಜ್ಯದ ಆರು ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಿದೆ. ಬಿಜಿಪಿ ಎರಡನೇ ಸ್ಥಾನಕ್ಕೆ ಕುಸಿದರೆ, ಜೆಡಿಎಸ್​ಗೆ ಮೂರನೇ ಸ್ಥಾನ ಲಭಿಸಿದೆ. 6 ನಗರ ಸ್ಥಳೀಯ ಸಂಸ್ಥೆಗಳ 167 ವಾರ್ಡ್​ಗಳ ಪೈಕಿ ಕಾಂಗ್ರೆಸ್ 69, ಬಿಜೆಪಿ 59, ಜೆಡಿಎಸ್ 15, ಭಾ.ಪ್ರ.ಪ 7, ಎಸ್​ಡಿಪಿಐ 3 ಹಾಗೂ ಪಕ್ಷೇತರರು 14ರಲ್ಲಿ ಜಯಗಳಿಸಿದ್ದಾರೆ.
ಹೊಸಪೇಟೆ ನಗರಸಭೆಯಲ್ಲಿ ಬಿಜೆಪಿ 22 ಸ್ಥಾನ ಪಡೆಯುವ ಮೂಲಕ ಅಧಿಕಾರಕ್ಕೇರಿದೆ. ಉಳಿದಂತೆ ಭಾ.ಪ್ರ.ಪ 7, ಎಸ್​ಡಿಪಿಐ ಹಾಗೂ ಪಕ್ಷೇತರರು ತಲಾ ಒಂದು ಸ್ಥಾನ ಗಳಿಸಿದ್ದಾರೆ. ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಕಾಂಗ್ರೆಸ್ 16 ಸ್ಥಾನ ಪಡೆದು ಗದ್ದುಗೆ ಹಿಡಿದಿದ್ದರೆ, ಬಿಜೆಪಿ 9, ಜೆಡಿಎಸ್ 2, ಪಕ್ಷೇತರರು 4 ವಾರ್ಡ್​ಗಳಲ್ಲಿ ವಿಜಯ ಸಾಧಿಸಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ನಗರಸಭೆಯಲ್ಲಿ ಕಾಂಗ್ರೆಸ್ 14, ಬಿಜೆಪಿ 3, ಜೆಡಿಎಸ್ 7, ಎಸ್​ಡಿಪಿಐ 2 ಹಾಗೂ ಪಕ್ಷೇತರರು 5 ಸ್ಥಾನಗಳು ಪಡೆದಿದ್ದು, ಅತಂತ್ರ ಪರಿಸ್ಥಿತಿ ನಿರ್ವಣವಾಗಿದೆ. ಬಳ್ಳಾರಿಯ ಸಿರಗುಪ್ಪ ನಗರಸಭೆಯಲ್ಲಿ ಕಾಂಗ್ರೆಸ್ 19 ಸ್ಥಾನಗಳು ಪಡೆದರೆ, ಬಿಜೆಪಿ 11, ಪಕ್ಷೇತರರು 1ರಲ್ಲಿ ಗೆದ್ದಿದ್ದಾರೆ. ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣ ಪಂಚಾಯತ್​ನಲ್ಲಿ 11 ಸ್ಥಾನ ಪಡೆದು ಬಿಜೆಪಿ ಮುಂಚೂಣಿಯಲ್ಲಿದೆ. ಕಾಂಗ್ರೆಸ್ 9 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಪುರಸಭೆಯಲ್ಲಿ ಕಾಂಗ್ರೆಸ್ 11, ಬಿಜೆಪಿ 3, ಜೆಡಿಎಸ್ 6, ಪಕ್ಷೇತರರು 3 ಕ್ಷೇತ್ರಗಳಲ್ಲಿ ಗೆದ್ದಿದ್ದು, ಅತಂತ್ರ ಸ್ಥಿತಿ ನಿರ್ವಣವಾಗಿದೆ.
ಉಪ ಚುನಾವಣೆ:ಮೈಸೂರು ಮಹಾನಗರ ಪಾಲಿಕೆ, ಖಾನಾಪುರ ಪಟ್ಟಣ ಪಂಚಾಯತ್, ಹಿರೇಕೆರೂರು ಪಟ್ಟಣ ಪಂಚಾಯತ್​ನ ಒಂದೊಂದು ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ.
ಹುಕ್ಕೇರಿ ತಾಲೂಕಿನ ಹೆಬ್ಬಾಳ ಜಿಲ್ಲಾ ಪಂಚಾಯತ್​ಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ತಾಪಂನಲ್ಲಿ ಬಿಜೆಪಿ, ಚನ್ನಪಟ್ಟಣದ ಮತ್ತಿಕೆರೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ, ಮಾಲೂರಿನ ಲಕ್ಕೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಚಿಂತಾಮಣಿಯ ಕುರುಬೂರುನಲ್ಲಿ ಭಾರತೀಯ ಪ್ರಜಾ ಪಕ್ಷದ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಗೌರಿಬಿದನೂರಿನ ಅಲಕಾಪುರದಲ್ಲಿ ಸ್ವತಂತ್ರ ಹಾಗೂ ಶ್ಯಾಂಪುರದಲ್ಲಿ ಬಿಜೆಪಿ, ರಾಮದುರ್ಗದ ಕಟಕೋಳದಲ್ಲಿ ಬಿಜೆಪಿ, ಹಾನಗಲ್​ನ ತಿಳವಳ್ಳಿಯಲ್ಲಿ ಕಾಂಗ್ರೆಸ್, ಸಿರಗುಪ್ಪದ ಕರೂರಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 4 =
Remember me
