ಬೆಂಗಳೂರು:ಮರಗಳ ಅಕ್ರಮ ಕಡಿತಲೆ ತಡೆಯಲು ಮತ್ತು ಅಮೂಲ್ಯ ವೃಕ್ಷ ಸಂಪತ್ತು ಉಳಿಸಲು ಸಂಕಲ್ಪ ಮಾಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಬೀಟೆ, ಶ್ರೀಗಂಧ, ತೇಗದ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚನೆ ನೀಡಿದ್ದಾರೆ.
ಕಾಡನಂಚಿನಲ್ಲಿರುವ ಎಲ್ಲ ಜಮೀನಿನಲ್ಲಿ ಅಂದರೆ ಗ್ರಾಮಗಳಿಗೆ ಹೊಂದಿಕೊಂಡ ವನಪ್ರದೇಶ, ಪಟ್ಟಾಭೂಮಿ ಮತ್ತು ಸರ್ಕಾರಿ ಜಮೀನಿನಲ್ಲಿರುವ ಬೀಟೆ (ರೋಸ್ ವುಡ್), ತೇಗ (ಟೀಕ್) ಮತ್ತು ಶ್ರೀಗಂಧ (ರಕ್ತ ಚಂದನ) ಮರಗಳಿಗೆ 3 ತಿಂಗಳ ಅವಧಿಯೊಳಗೆ ಜಿಯೋ ಟ್ಯಾಗ್ ಮಾಡಿ ಇಲಾಖೆಗೆ ವಲಯವಾರು ಪಟ್ಟಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ.
ಹಾಸನ ಜಿಲ್ಲೆ ಬೇಲೂರು ತಾಲೂಕು ನಂದಗೋಡನಹಳ್ಳಿ, ಸಕಲೇಶಪುರದ ಕೌಡಳ್ಳಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಇಡಗುಂದಿ ಮೊದಲಾದ ಕಡೆಗಳಲ್ಲಿ ಇತ್ತೀಚೆಗೆ ಅಕ್ರಮವಾಗಿ ನೂರಾರು ಅಮೂಲ್ಯ ವೃಕ್ಷಗಳನ್ನು ಕಡಿದ ಪ್ರಕರಣಗಳು ಬೆಳಕಿಗೆ ಬಂದಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ. ಹಾಗಾಗಿ ಶುಂಠಿ ಬೆಳೆಯ ಹೆಸರಲ್ಲಿ ಮರಗಳ ಹನನ ಆಗುತ್ತಿರುವುದನ್ನು ತಪ್ಪಿಸಲು ಶ್ರೀಗಂಧ, ತೇಗ ಮತ್ತು ಬೀಟೆ ಮರಗಳ ಜಿಯೋ ಟ್ಯಾಗ್ ಮಾಡಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಟಿಪ್ಪಣಿಯಲ್ಲಿ ಸೂಚನೆ ನೀಡಿದ್ದಾರೆ.
ಅರಣ್ಯದೊಳಗೆ ಬೆಲೆ ಬಾಳುವ ಮರ ಕಡಿದು ಸಾಗಾಟ ಮಾಡಲು ಸಾಧ್ಯವಾಗದಂತೆ ಕಳ್ಳಬೇಟೆ ನಿಗ್ರಹ ತಂಡಗಳನ್ನು ನಿಯೋಜಿಸಲಾಗಿದೆ. ಆದರೆ ಕಾಡಿನಂಚಿನಲ್ಲಿ ಮತ್ತು ಸರ್ಕಾರಿ ಭೂಮಿಯಲ್ಲಿ, ಅರಣ್ಯ ಇಲಾಖೆ ಗುತ್ತಿಗೆ ನೀಡಿರುವ ಎಸ್ಟೇಟ್ ಹಾಗೂ ಪಟ್ಟಾ ಜಮೀನಿನಲ್ಲಿರುವ ಬೆಲೆಬಾಳುವ ವೃಕ್ಷಗಳ ಸಂರಕ್ಷಣೆ ಇಲಾಖೆಗೆ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಜಿಯೋ ಟ್ಯಾಗ್ ಮಾಡಿದರೆ ವೃಕ್ಷ ಸಂರಕ್ಷಣಾ ಕಾಯಿದೆ ಅಡಿ ಪೂರ್ವಾನುಮತಿ ಪಡೆಯದೆ ಮರ ಕಡಿಯಲು ಸಾಧ್ಯವಾಗುವುದಿಲ್ಲ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 10 =
Remember me
