ಮೈಸೂರು:ಯಶಸ್ವಿನಿ ಯೋಜನೆ ಸಂಬಂಧ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದ್ದು, ಅ.2ರಂದು ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಜಿಲ್ಲಾಡಳಿತದಿಂದ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವರ್ಷದ ಬಜೆಟ್​ನಲ್ಲಿ ಯಶಸ್ವಿನಿ ಯೋಜನೆಯನ್ನು ಪುನರಾರಂಭಿಸಲು ಮಹತ್ವದ ಘೊಷಣೆ ಮಾಡಿದ್ದು, ಅದಕ್ಕಾಗಿ 300 ಕೋಟಿ ರೂ. ಮೀಸಲಿಡಲಾಗಿದೆ. ಈ ಪೈಕಿ 100 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಯಶಸ್ವಿನಿ ಯೋಜನೆ ರೈತರ ಆರೋಗ್ಯದ ಆಶಾಕಿರಣವಾಗಿದೆ ಎಂದರು.
ರಾಜ್ಯದ 28 ಸಾವಿರ ಗ್ರಾಮಗಳಲ್ಲಿ ತಲಾ ಒಂದು ವಿವೇಕಾನಂದ ಸ್ವಸಹಾಯ ಸಂಘ ರಚಿಸಿ, ಯುವಕರಿಗೂ ಆರ್ಥಿಕ ನೆರವು, ಬ್ಯಾಂಕ್ ವ್ಯವಸ್ಥೆ, ತರಬೇತಿ ಹಾಗೂ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ವಿದ್ಯಾನಿಧಿ ಯೋಜನೆಯನ್ನು ನೇಕಾರರು ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಹಾಗೂ ಮೀನುಗಾರರ ಮಕ್ಕಳಿಗೂ ವಿಸ್ತರಿಸಲಾಗಿದೆ. 10ರಿಂದ 12 ಸಾವಿರ ನೇಕಾರರ ಮಕ್ಕಳಿಗೆ, 50 ಸಾವಿರ ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಹಾಗೂ ಮೀನುಗಾರರ ಮಕ್ಕಳಿಗೆ ಇದರ ಲಾಭ ದೊರೆಯಲಿದೆ ಎಂದು ತಿಳಿಸಿದರು.
ರೈತರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಬಸವರಾಜ ಬೊಮ್ಮಾಯಿ ಅವರು ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದಾರೆ. ಈ ಕಾರ್ಯಕ್ರಮದಲ್ಲಿ 2022ರ ಮಾರ್ಚ್ ಅಂತ್ಯದವರೆಗೆ 38,060 ವಿದ್ಯಾರ್ಥಿಗಳಿಗೆ 1707 ಲಕ್ಷ ರೂ. ವಿದ್ಯಾರ್ಥಿ ವೇತನ ನೀಡಲಾಗಿದೆ ಎಂದರು.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿ ಮತ್ತು ಆದ್ಯತಾ ಪಡಿತರ ಚೀಟಿ ಸೇರಿ ಒಟ್ಟು 7.07 ಲಕ್ಷ ಪಡಿತರ ಚೀಟಿಗಳಿದ್ದು ಒಟ್ಟು 22.67 ಲಕ್ಷ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿಯಂತೆ ಪ್ರತಿ ಮಾಹೆ ಒಟ್ಟು 1.13 ಲಕ್ಷ ಕ್ವಿಂಟಾಲ್ ಅಕ್ಕಿ ವಿತರಣೆಯಾಗುತ್ತಿದೆ ಎಂದು ತಿಳಿಸಿದರು.
ಶಿವಮೊಗ್ಗ, ಭದ್ರಾವತಿ ನಗರ ವ್ಯಾಪ್ತಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ನರೇಂದ್ರ ಮೋದಿ ಹುಟ್ಟಿದ್ದೆ ಈ ದೇಶವನ್ನ ಹಿಂದೂರಾಷ್ಟ್ರ ಮಾಡೋಕೆ: ಶಾಸಕ ಯತ್ನಾಳ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 7 =
Remember me
