ಬೆಂಗಳೂರು:ಕಾಂಗ್ರೆಸ್‌ಗೆ ಈಗ ಕಾವೇರಿ, ಕನ್ನಡಿಗರ ಬಗ್ಗೆ ಚಿಂತೆ ಇಲ್ಲ. ಅವರಿಗೆ ಘರ್ ವಾಪ್ಸಿಯದ್ದೇ ಚಿಂತೆಯಾಗಿದೆ. ಈ ಚಿಂತೆಯಲ್ಲಿರುವ ಅವರು ನಮ್ಮನ್ನು ಸರ್ವಪಕ್ಷ ಸಭೆಗೆ ಕರೆಯುತ್ತಾರೋ ಇಲ್ಲವೋ ಗೊತ್ತಿಲ್ಲ. ಅವರು ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ ಎಂದು ಕುಮಾರಸ್ವಾಮಿ ಕುಟುಕಿದರು.
ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಜರಗನಹಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆ, ಕಮೀಷನ್ ವ್ಯವಹಾರ, ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಹಾದಿ ಬೀದಿಯಲ್ಲಿ ಜನರು ಛೀ, ಥೂ ಎನ್ನುತ್ತಿದ್ದಾರೆ. ಇದನ್ನು ಮರೆ ಮಾಚಲು ಘರ್‌ ವಾಪ್ಸಿ ನಾಟಕ ಆಡುತ್ತಿದೆ ಎಂದು ಟೀಕಿಸಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಅರ್ಧಕ್ಕರ್ಧ ಮುಗಿದು ಹೋಗುತ್ತದೆ, ಜೆಡಿಎಸ್ ಮುಗಿದೇ ಹೋಗುತ್ತದೆ ಎನ್ನುತ್ತಿದ್ದಾರೆ. ನಿನ್ನೆ ,ಮೊನ್ನೆ ಆಯ್ಕೆ ಆದವರು ಕೂಡ 10-20ಕ್ಕೂ ಹೆಚ್ಚು ಎಂಎಲ್ಎಗಳು ಬರುತ್ತಾರೆ ಎಂದು ಹೇಳುತ್ತಿದ್ದಾರೆ. ಆದರೆ ಆ ಪಕ್ಷದಲ್ಲಿ ಇರುವ ಶಾಸಕರ ತಳಮಳದ ಬಗ್ಗೆ ಅವರು ಮಾತನಾಡುತ್ತಿಲ್ಲ, ಯಾಕೆ ಎಂದು ಪ್ರಶ್ನಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
