ಬೆಂಗಳೂರು:ಪಾಲಕರು ತನ್ನನ್ನು ಪ್ರಿಯಕರನಿಂದ ದೂರ ಮಾಡುತ್ತಾರೆ ಎಂಬ ಕಾರಣಕ್ಕೆ ಯುವತಿಯೊಬ್ಬಳು ಪೊಲೀಸ್ ಠಾಣೆ ಮುಂಭಾಗದಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಆಂಧ್ರಪ್ರದೇಶದ ಕಡಪಾ ಮೂಲದ ಅರುಣಾ ಆತ್ಮಹತ್ಯೆಗೆ ಯತ್ನಿಸಿದ ಯುವತಿ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಈಕೆಯ ವಿರುದ್ಧ ಆತ್ಮಹತ್ಯೆಗೆ ಯತ್ನ ಆರೋಪದಡಿ ಅಶೋಕನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿಪ್ರಿಯಕರನ ಜತೆ ಪತ್ನಿ ಪರಾರಿ; ಬೇಸರದಲ್ಲಿ ಪಾನಮತ್ತ ಪತಿ ಮಾಡಿಕೊಂಡ ಅನಾಹುತ ನೋಡಿ…!
ಅರುಣಾ ತನ್ನ ಊರಿನ ರಾಜ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಇವರ ಪ್ರೀತಿಗೆ ಎರಡು ಕಡೆಯ ಕುಟುಂಬದಿಂದ ವಿರೋಧ ಇತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ಮನೆ ಬಿಟ್ಟು ನಗರಕ್ಕೆ ಬಂದಿದ್ದರು. ರಾಜ್ ತನಗೆ ಪರಿಚಯಸ್ಥರೊಬ್ಬರಿಗೆ ಕರೆ ಮಾಡಿ ಪ್ರಿಯತಮೆಯ ಜೊತೆ ಬಂದಿರುವ ವಿಷಯ ತಿಳಿಸಿದ್ದ. ಒಂದು ದಿನದ ಮಟ್ಟಿಗೆ ಉಳಿದುಕೊಳ್ಳಲು ಅವಕಾಶ ಮಾಡಿಕೊಡುವಂತೆ ಕೇಳಿದ್ದ. ಪೋಷಕರಿಂದ ಬೆದರಿಕೆ ಇರುವ ಬಗ್ಗೆ ಹೇಳಿಕೊಂಡಿದ್ದ. ಅವರ ಸಲಹೆ ಮೇರೆಗೆ ಮಹದೇವಪುರ ಠಾಣೆ ಪೊಲೀಸರನ್ನು ಸಂಪರ್ಕ ಮಾಡಿದ್ದರು.
ಈ ವೇಳೆ ಅಲ್ಲಿನ ಪೊಲೀಸರು, ಕಡಪಾ ಜಿಲ್ಲೆಯಲ್ಲಿ ಅರುಣಾ ನಾಪತ್ತೆಯಾಗಿರುವ ದೂರು ದಾಖಲಾಗಿದೆ. ಅಶೋಕನಗರ ಪೊಲೀಸ್ ಠಾಣೆಗೆ ಹೋಗುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ರಾತ್ರಿ 10 ಗಂಟೆಯಲ್ಲಿ ಅಶೋಕನಗರ ಠಾಣೆಗೆ ಬಂದಿದ್ದಾರೆ. ಊರಿನಿಂದ ಪಾಲಕರು ಬರುತ್ತಿರುವ ಹಿನ್ನೆಲೆಯಲ್ಲಿ ಠಾಣೆ ಮುಂದೆ ಕಾಯುತ್ತಿದ್ದರು. ಈ ವೇಳೆ ಯುವತಿ ಹೇರ್ ಡೈ ಆಯಿಲ್ ಸೇವಿಸಿದ್ದಾಳೆ. ಕೆಲ ನಿಮಿಷಗಳ ಬಳಿಕ ವಾಂತಿ ಮಾಡಿಕೊಂಡಿದ್ದು, ವಿಚಾರಿಸಿದಾಗ ಆತ್ಮಹತ್ಯೆಗೆ ಯತ್ನಿಸಿರುವುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಫೇಸ್​ಬುಕ್ ಪಾಸ್​ವರ್ಡ್ ಕೊಟ್ಟು ಕೆಟ್ಟ ಪ್ರಿಯಕರ: ಬ್ಲ್ಯಾಕ್​ಮೇಲ್​ ಶುರುಮಾಡಿದ್ಳು ಪ್ರೇಯಸಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
