ಕೋಲಾರ:ಹೆಣ್ಣು ಮಗು ಹುಟ್ಟಿದ್ದಕ್ಕೆ ಮನನೊಂದ ತಂದೆಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀನಿವಾಸಪುರ ತಾಲೂಕಿನ ಶೆಟ್ಟಹಳ್ಳಿಯಲ್ಲಿ ನಡೆದಿದೆ.
ಶೆಟ್ಟಿಹಳ್ಳಿಯ ಲೋಕೇಶ್(34) ಮೃತ. 3 ಹೆಣ್ಣುಮಕ್ಕಳಿದ್ದು, 4ನೇ ಮಗುವಿನ ಹೆರಿಗೆಗಾಗಿ ಹೆಂಡತಿ ಶಿರಿಷಾ, ತವರೂರು ಪುಂಗನೂರಿಗೆ ಹೋಗಿದ್ದರು. ದಂಪತಿ ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು. ಶುಕ್ರವಾರ ರಾತ್ರಿ ಶಿರಿಷಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂಬ ವಿಷಯ ತಿಳಿದು ಮನನೊಂದ ಲೋಕೇಶ್​, ಶೆಟ್ಟಿಹಳ್ಳಿ ಮನೆಯಲ್ಲಿ ಮರುದಿನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಭಾನುವಾರ ಬೆಳಗ್ಗೆ ಎಷ್ಟೊತ್ತಾದರೂ ಕೋಣೆಯಿಂದ ಮಗ ಹೊರಗೆ ಬಾರದೇ ಇದ್ದುದರಿಂದ ಅನುಮಾನಗೊಂಡ ತಂದೆ ಆಂಜನಪ್ಪ, ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಶ್ರೀನಿವಾಸಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈಶ್ವರಪ್ಪ ಫೋಟೋವುಳ್ಳ ನೋಟು ಬಿಡುಗಡೆ ಮಾಡಿ ಅಣಕಿಸಿದ ಕಾಂಗ್ರೆಸ್!

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಅತ್ತೆ-ಸೊಸೆ-ಮೊಮ್ಮಗಳು ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + seven =
Remember me
