ಆನೇಕಲ್:ಪ್ರೇಮ ವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ ಟೌನ್​ನಲ್ಲಿ ಸೋಮವಾರ ನಡೆದಿದೆ.
ಇದನ್ನೂ ಓದಿ:ಕರೊನಾ ಸಂಕಷ್ಟ ಕಾಲದಲ್ಲಿ ದೇಹರಕ್ಷಣೆಗೆ ಮೂರು ಸೂತ್ರಗಳು
ಬಿ.ತನುಜ(22) ನೇಣಿಗೆ ಶರಣಾದ ಯುವತಿ. ದ್ವಿತೀಯ ಪಿಯುಸಿ ಓದಿದ್ದ ತನುಜ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಸಂಜೆ 6 ಗಂಟೆಗೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ತನುಜ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಿಯಕರ ಕೈಕೊಟ್ಟಿದ್ದಕ್ಕೆ ಮನನೊಂದು ಈ ರೀತಿ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ.
ತನುಜ ಅವರ ತಂದೆ-ತಾಯಿ ಕೈಮಗ್ಗ ನಡೆಸುತ್ತ ಜೀವನ ನಡೆಸುತ್ತಿದ್ದಾರೆ. ಇದೀಗ ಬೆಳೆದ ಮಗಳನ್ನು ಕಳೆದುಕೊಂಡು ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮೃತದೇಹವನ್ನು ಮುಂದಿನ ಕ್ರಮಕ್ಕಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:222 ಮಾರ್ಗಗಳಲ್ಲಿ ಬಸ್ ಸಂಚಾರ ರದ್ದು
ರಾಜ್ಯದಲ್ಲಿ ವಾಹನಗಳು 30 ದಿನ ನಿಂತಲ್ಲೇ ನಿಲ್ಲುವಂತಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 11 =
Remember me
