ಯಾದಗಿರಿ:ಬೇಸಿಗೆಯ ಈ ರಜೆಯ ಸಂದರ್ಭದಲ್ಲಿ ಮಕ್ಕಳು ದುರಂತ ಸಾವಿಗೀಡಾಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದ್ದು, ಬಾಲಕಿಯೊಬ್ಬಳು ಟ್ರಾನ್ಸ್​ಫಾರ್ಮರ್​ ಸ್ಪರ್ಶದಿಂದ ಶಾಕ್​ಗೆ ಒಳಗಾಗಿ ಸಾವಿಗೀಡಾಗಿದ್ದಾಳೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ಈ ಸಾವು ಸಂಭವಿಸಿದೆ. ಅಂಜಲಿ ಎಂಬಾಕೆ ಸಾವಿಗೀಡಾದ ಬಾಲಕಿ. ಈ ಬಾಲಕಿಯ ಸಾವಿಗೆ ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಇದೇ ಸ್ಥಳದಲ್ಲಿ ಜೆಟ್ಟೆಪ್ಪ ಎಂಬ ಯುವಕ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದ. ಯುವಕ ಮೃತ ಪಟ್ಟ ನಂತರವೂ ಈ ಟ್ರಾನ್ಸ್​ಫಾರ್ಮರ್​ ಸುತ್ತ ಯಾವುದೇ ಸುರಕ್ಷಿತ ಕ್ರಮಕೈಗೊಳ್ಳದೆ ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪದೇಪದೆ ವಿದ್ಯುತ್ ಅವಘಡಗಳು ಸಂಭವಿಸಿ ಜೀವಹಾನಿಯಾದರೂ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುತ್ತಿಲ್ಲ. ಟ್ರಾನ್ಸ್​​ಫಾರ್ಮರ್​ಗೆ ಸುತ್ತುಗೋಡೆ ನಿರ್ಮಾಣ ಮಾಡಿ ಸುರಕ್ಷತಾ ಕ್ರಮವಹಿಸಬೇಕು, ಅಲ್ಲದೆ ಸಾವಿಗೀಡಾದ ಬಾಲಕಿಯ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಲಾಕ್​ಡೌನ್​ ಸೆಕ್ಸ್​: ಆರ್​ಟಿಐನಲ್ಲಿ ಬಹಿರಂಗವಾಯ್ತು ಆತಂಕಕಾರಿ ವಿಷಯ!
ಸ್ನೇಹಿತನ ಶವ ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಾರ್ಗ ಮಧ್ಯೆ ಸ್ಥಳದಲ್ಲೇ ಸಾವು!
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:two + 14 =
Remember me
