ಕಲಬುರಗಿ:ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಯುವತಿ ಫೋಟೋವನ್ನು ದುರ್ಬಳಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಬೇಸತ್ತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ತಾಲೂಕಿನ ಬುಗಡಿ ತಾಂಡಾದಲ್ಲಿ ಬುಧವಾರ ನಡೆದಿದೆ.
ಇದನ್ನೂ ಓದಿ:ಆಸ್ತಿಗಾಗಿ ಕೋರ್ಟ್ ಮೆಟ್ಟಿಲೇರಿರುವ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಪತ್ನಿಯ ಬೇಡಿಕೆ ಏನು?
ಬುಗಡಿ ತಾಂಡಾ ನಿವಾಸಿ ಸರಿತಾ(18) ನೇಣಿಗೆ ಶರಣಾದ ದುರ್ದೈವಿ. ಅದೇ ಗ್ರಾಮದ ಶ್ರೀನಿವಾಸ ಎಂಬಾಂತ ಈ ನೀಚ ಕೃತ್ಯ ಎಸಗಿದ್ದಾನೆ.
ಆರೋಪಿ ಶ್ರೀನಿವಾಸ ಯುವತಿಯ ಜತೆ ತನ್ನ ಫೋಟೋ ರೀಮಿಕ್ಸ್ ಮಾಡಿ ಸಾಮಾಜಿಕ ತಾಣದಲ್ಲಿ ಹರಿಬಿಟ್ಟಿದ್ದ. ಅಲ್ಲದೆ, ದಿನನಿತ್ಯ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಆತನ ಕಾಟ ತಾಳಲಾರದೇ ಸರಿತಾ ನೇಣಿಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.
ಇದನ್ನೂ ಓದಿ:ಗೊಂದಲದ ಗೂಡಾದ ಆನ್​ಲೈನ್ ಶಿಕ್ಷಣ: ಹೈಕೋರ್ಟ್ ಆನ್​ಲೈನ್ ಶಿಕ್ಷಣ ಪರವಾಗಿ ತೀರ್ಪು
ಪತ್ರ ಬರೆದಿಟ್ಟು ಸರಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ಬೆನ್ನಲ್ಲೇ ಆರೋಪಿ ಶ್ರೀನಿವಾಸ ಗ್ರಾಮದಿಂದ ಪರಾರಿಯಾಗಿದ್ದಾನೆ. ರಟಕಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಪೆನ್​ಡ್ರೈವ್ ರಹಸ್ಯ: ಮುರುಗೇಶ್ ನಿರಾಣಿ ಯೂಟರ್ನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + one =
Remember me
