ಚಿಕ್ಕಬಳ್ಳಾಪುರ:ಹೆಣ್ಣುಮಕ್ಕಳಿಗೆ ಅವಕಾಶ ಸಿಕ್ಕರೆ ಅವರು ಗಂಡುಮಕ್ಕಳನ್ನು ಮೀರಿ ಬೆಳೆಯುತ್ತಾರೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದ ಶ್ರೀ ಸತ್ಯಸಾಯಿ ಪ್ರೇಮಾಮೃತಂ ಸಭಾಂಗಣದಲ್ಲಿ ಆಯೋಜಿಸಿದ್ದ ಶ್ರೀ ಸತ್ಯಸಾಯಿ ಯುನಿವರ್ಸಿಟಿ ಆಫ್ ಹ್ಯೂಮನ್ ಎಕ್ಸಲೆನ್ಸ್​ನ ಎರಡನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
“ಏ ಟ್ರೇಲರ್ ಹೈ, ಪಿಚ್ಚರ್ ಅಭಿ ಬಾಕಿ ಹೈ” ಎಂದು ಹೆಣ್ಣುಮಕ್ಕಳ ಸಾಧನೆಯ ಕುರಿತಂತೆ ಡೈಲಾಗ್ ಹೊಡೆದ ಅವರು, ಹೆಣ್ಣುಮಕ್ಕಳಿಗೆ ಅವಕಾಶ ಸಿಕ್ಕಿದರೆ ದೊಡ್ಡ ಸಾಧನೆಗಳನ್ನು ಮಾಡುತ್ತಾರೆ. ಮಾತ್ರವಲ್ಲ, ಗಂಡುಮಕ್ಕಳನ್ನು ಮೀರಿ ಬೆಳೆಯುತ್ತಾರೆ ಎಂದು ಹೇಳಿದರು.
ನನಗೆ ಜಾರ್ಖಂಡ್ ಪ್ರಥಮ ರಾಜ್ಯಪಾಲೆ, ರಾಷ್ಟ್ರಪತಿ ಗರಿಮೆ ಸಿಕ್ಕಿದೆ. ಇವೆಲ್ಲವೂ ಮಹಿಳಾ ಸಾಧನೆಯ ನಿದರ್ಶನಗಳು. ಇವು ಕೇವಲ ಟ್ರೇಲರ್, ಇನ್ನೂ ಪಿಚ್ಚರ್​ ಬಾಕಿ ಇದೆ ಎಂದ ಅವರು, ಭಾರತದ ಪರಂಪರೆ, ಇತಿಹಾಸದ ಬಗ್ಗೆ ನನಗೆ ಹೆಮ್ಮೆ ಇದೆ ಎಂದರು.
ಇದನ್ನೂ ಓದಿ:ಶೈಕ್ಷಣಿಕ ಜ್ಞಾನ ದೇಶದ ಹಿತಾಸಕ್ತಿ, ಸಮಾಜದ ಒಳಿತಿಗೆ ಬಳಕೆಯಾಗಲಿ: ಪದವೀಧರರಿಗೆ ರಾಜ್ಯಪಾಲರ ಕಿವಿಮಾತು
ಮುದ್ದೇನಹಳ್ಳಿಯ ಸತ್ಯಸಾಯಿ ಲೋಕಸೇವಾ ಸಂಸ್ಥೆಯಲ್ಲಿ ಕೈಗೊಂಡಿದ್ದ ಘಟಿಕೋತ್ಸವದಲ್ಲಿ ಅವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಚಿನ್ನದ ಪದಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಗೌರವದ ಪುರಸ್ಕಾರವನ್ನೂ ಮಾಡಿದರು.
ಬಾಲ್ಯದಲ್ಲೇ ಖುಷಿಗಾಗಿ ಓದಿದ ಮಕ್ಕಳ ಹದಿಹರೆಯ ಸುಂದರ!; ಸಾವಿರಾರು ಮಕ್ಕಳನ್ನು ಒಳಗೊಂಡ ಅಧ್ಯಯನದಲ್ಲಿ ಬಹಿರಂಗ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 10 =
Remember me
